ದರ್ಗಾಕ್ಕೆ ಡಿಕ್ಕಿ ಹೊಡೆದ ಕಾರು ; ಸ್ಥಳದಲ್ಲೇ ಮೂವರ ದುರ್ಮರಣ!

Share the Article

ಹುಬ್ಬಳ್ಳಿ: ದರ್ಗಾವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಒಬ್ಬರು ಗಾಯಗೊಂಡ ಘಟನೆ ಕುಂದಗೋಳ ತಾಲೂಕಿನ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಜಿಗಳೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ.

ಕೆಯುಡಿಯ ಎಇಇ ರವೀಂದ್ರ ನಾಗನಾಥ, ಇವರ ಮಾವ ಹನಮಂತಪ್ಪ ಬೇವಿನಕಟ್ಟಿ, ಅತ್ತೆ ರೇಣುಕಾ ಬೇವಿನಕಟ್ಟಿ ಸ್ಥಳದಲ್ಲಿ ಸಾವಿಗೀಡಾಗಿದ್ದು, ರವೀಂದ್ರ ಅವರ ಪತ್ನಿ ಅರುಂಧತಿಗೆ ಗಂಭೀರ ಗಾಯಗಳಾಗಿವೆ.

ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ಬರುವ ಸಮಯದಲ್ಲಿ ನಿಯಂತ್ರಣ ತಪ್ಪಿ ದರ್ಗಾಗೆ ಕಾರು ಡಿಕ್ಕಿ ಹೊಡೆದಿದ್ದು, ಈ ವೇಳೆ ಪತಿ-ಪತ್ನಿ, ಅಳಿಯ ಸಾವಿಗೀಡಾಗಿದ್ದು, ಮಗಳು ಗಂಭೀರ ಗಾಯಗೊಂಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕುಂದಗೋಳ ಠಾಣೆ ಇನ್ಸಪೆಕ್ಟರ್ ಮಾರುತಿ ಗುಳ್ಳಾರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave A Reply