ಪ್ರವೀಣ್ ನೆಟ್ಟಾರು ಹತ್ಯೆ : ಶಫೀಕ್ ಬೆಳ್ಳಾರೆಗೆ ನ್ಯಾಯಾಂಗ ಬಂಧನ

ಸುಳ್ಯ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟು ಪೊಲೀಸ್ ಕಸ್ಟಡಿಯಲ್ಲಿದ್ದ ಶಫೀಕ್ ಬೆಳ್ಳಾರೆ ಗೆ ನ್ಯಾಯಾಂಗ ಬಂಧನ ಒಪ್ಪಿಸಲಾಗಿದೆ

 

ಬಂಧಿತ ಆರೋಪಿ ಶಫೀಕ್ ಬೆಳ್ಳಾರೆಯನ್ನು ಆ.6ರ ಶನಿವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಈ ವೇಳೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್ ಬೆಳ್ಳಾರೆ ಮತ್ತು ಜಾಕೀರ್ ಸವಣೂರು ಅವರಿಬ್ಬರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿದ್ದರು. 5 ದಿನ ಕಳೆದ ಬಳಿಕ ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜಾಕೀರ್‌ನನ್ನು ನ್ಯಾಯಾಂಗ ಬಂಧನಕ್ಕೆ ಮತ್ತು ಶಫೀಕ್ ಬೆಳ್ಳಾರೆಯನ್ನು ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.

ಇದೀಗ ಶಫೀಕ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave A Reply

Your email address will not be published.