ರಾಜ್ಯದ ಮಹಿಳೆಯರೇ, ರಾಜ್ಯಸರಕಾರದಿಂದ ನಿಮಗೊಂದು ಸಿಹಿ ಸುದ್ದಿ |

ಮಹಿಳೆಯರಿಗೆ ರಾಜ್ಯ ಸರಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮಹಿಳೆಯರಿಗಾಗಿ ಶೀಘ್ರವೇ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಪ್ರತಿ ಕ್ಷೇತ್ರದಲ್ಲೂ ಮಹಿಳೆಯರಿಗೆ ಆದ್ಯತೆ ನೀಡಬೇಕೆನ್ನುವುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮುಖ್ಯ ಗುರಿಯಾಗಿದೆ. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಜೊತೆಗೆ ಮಹಿಳೆಯರಿಗಾಗಿ ರಾಜ್ಯಾದ್ಯಂತ ವಿಶೇಷ ಕ್ಲಿನಿಕ್ ಆರಂಭಿಸುವ ಯೋಚನೆಯಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದ್ದು, ಶೀಘ್ರವೇ ಮಹಿಳಾ ವಿಶೇಷ ಕ್ಲಿನಿಕ್ ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ಹೇಳಿದರು.

ಚಿಕ್ಕಬಳ್ಳಾಪುರ ಜಿಲ್‌ಎಯ ಜಡಬಂಡಹಳ್ಳಿ ಗ್ರಾಮದಲ್ಲಿ ಸ್ತ್ರೀಶಕ್ತಿ ಸಂಘಗಳ ಸದಸ್ಯರಿಗೆ ಸಾಲದ ಚೆಕ್ ವಿತರಿಸಿ ಮಾತನಾಡುತ್ತಾ ಅವರು ಈ ಮಾತನ್ನು ಹೇಳಿದ್ದಾರೆ.

ಅಷ್ಟು ಮಾತ್ರವಲ್ಲದೇ, ತೋಟದಿಂದ ಮಾರುಕಟ್ಟೆವರೆಗೂ ಸರಕಾರ ನಿಮ್ಮ ಜೊತೆ ಇರುತ್ತದೆ. ನೀವು ತಯಾರಿಸುವ ಅಥವಾ ಬೆಳೆಯುವ ಯಾವುದೇ ಪದಾರ್ಥಕ್ಕೆ ಸೂಕ್ತ ಮಾರುಕಟ್ಟೆ ಕಲ್ಪಿಸಲೂ ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಯೋಜನೆ ರೂಪಿಸಲಾಗಿದೆ.
ಸ್ತ್ರೀ ಶಕ್ತಿ ಸಂಘಗಳಿಗೆ ನೀಡುತ್ತಿರುವ ಸಾಲ ಬಡ್ಡಿ ರಹಿತ ಸಾಲ. ಇದನ್ನು ಕೇಂದ್ರ ಸರಕಾರ ನೀಡುತ್ತಿದೆ. ಆದರೆ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಮಾತ್ರ ಬಡ್ಡಿ ರಹಿತವಾಗಿದ್ದು, ಬ್ಯಾಂಕುಗಳಿಗೆ ಆ ಬಡ್ಡಿಯನ್ನು ರಾಜ್ಯ ಸರಕಾರ ಪಾವತಿಸಲಿದೆ ಎಂದು ಸಚಿವರು ಹೇಳಿದರು

Leave A Reply