ಸರ್ಕಾರಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್​ನಿಂದ ಹಳ್ಳಕ್ಕೆ ಬಿದ್ದ ಕಾರು; ಮೂವರ ಪರಿಸ್ಥಿತಿ ಚಿಂತಾಜನಕ, ನಾಲ್ವರಿಗೆ ಗಾಯ

ಕಾರೊಂದು ಫ್ಲೈಓವರ್​ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಾಲ್ವರಿಗೆ ಗಂಭೀರವಾದ ಗಾಯಗಳಾದ ಘಟನೆ ತಮಿಳುನಾಡಿನ ಸೂಲಗಿರಿ ಸಂಭವಿಸಿದೆ.

ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೋಗುತ್ತಿತ್ತು. ಈ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸೂಲಗಿರಿ ಸಮೀಪ ಕಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಫ್ಲೈಓವರ್​ನಿಂದ ಕೆಳಗಿನ ಹಳ್ಳವೊಂದಕ್ಕೆ ಬಿದ್ದಿದೆ.

ಗಾಯಾಳುಗಳನ್ನು ಬೆಂಗಳೂರು ಹೊರವಲಯದ ಚಂದಾಪುರದ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗೊಂಡವರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave A Reply

Your email address will not be published.