ಇನ್ಮುಂದೆ ಹೆಲ್ಮೆಟ್‌ ಕ್ಯಾಮರಾ ಅಳವಡಿಸಿ ಸಂಚರಿಸುವಂತಿಲ್ಲ!

ಇತ್ತೀಚೆಗೆ ಹೆಲ್ಮೆಟ್ ನಲ್ಲಿ ಕ್ಯಾಮರಾ ಅಳವಡಿಸಿ ರೈಡ್ ಮಾಡೋದು ಕಾಮನ್ ಆಗಿದೆ. ಅಲ್ಲದೆ, ಅದೇ ಟ್ರೆಂಡ್ ಆಗಿದೆ. ಆದರೆ ಇದೀಗ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುವಾಗ ಹೆಲ್ಮೆಟ್ ಕ್ಯಾಮರಾ ಅಳವಡಿಸುವಂತಿಲ್ಲ.

ಹೌದು. ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಇನ್ನು ಮುಂದೆ ಹೆಲ್ಮೆಟ್ ನಲ್ಲಿ ಕ್ಯಾಮರಾ ಕಂಡುಬಂದರೆ 1000 ರೂಪಾಯಿ ದಂಡ ವಿಧಿಸಲಾಗುತ್ತದೆ. ಮೊದಲ ಎಚ್ಚರಿಕೆ ನೀಡಿ ಬಳಿಕವೂ ಮರುಕಳಿಸಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಂಚಾರ ಆಯುಕ್ತರು ಹೇಳಿದ್ದಾರೆ.

ಇದಲ್ಲದೆ ಎಚ್ಚರಿಕೆಯ ಹೊರತಾಗಿಯೂ ಅಕ್ರಮ ಮುಂದುವರಿದರೆ ಮೂರು ತಿಂಗಳವರೆಗೆ ಪರವಾನಗಿ ರದ್ದುಪಡಿಸಲು ಆಯುಕ್ತರು ಆದೇಶ ನೀಡಿದ್ದಾರೆ. ಇದಕ್ಕೂ ಮುನ್ನ ಹೆಲ್ಮಟ್ ಕ್ಯಾಮೆರಾ ಬಳಸಿ ವಿಡಿಯೋ ಚಿತ್ರೀಕರಣ ಮಾಡುವುದು ಕಂಡು ಬಂದರೆ ವಾಹನ ದಾಖಲೆ ಮತ್ತು ಪರವಾನಗಿ ರದ್ದುಪಡಿಸಲಾಗುವುದು ಎಂದು ಮೋಟಾರು ವಾಹನ ಇಲಾಖೆ ತಿಳಿಸಿತ್ತು. ಇದೀಗ ಕೇರಳ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ಹೆಲ್ಮಟ್‌ಗೆ ಕ್ಯಾಮೆರಾ ಅಳವಡಿಸುವುದರಿಂದ ಸಾರ್ವಜನಿಕರಿಗೆ, ವಾಹನ ಸವಾರರಿಗೆ, ಅವರ ಖಾಸಗಿತನಕ್ಕೆ ಅಪಾಯವಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಇದರಿಂದಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

Leave A Reply

Your email address will not be published.