ಆಧಾರ್, ರೇಷನ್ ಕಾರ್ಡ್ ಇತರೆ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವತಿಯಿಂದ ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳಿಗೆ 2021-22 ನೇ ಸಾಲಿನ ‘ವಾಜಪೇಯಿ ನಗರ ಯೋಜನೆ’ಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ ವರ್ಗದವರಿಗೆ ಹಾಗೂ ‘ಡಾ.ಅಂಬೇಡ್ಕರ್ ನಗರ ವಸತಿ ಯೋಜನೆ’ಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸ್ವಂತ ಮನೆಯನ್ನು ನಿರ್ಮಿಸಲು ಪ್ರಕಟಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ವಾಸವಿದ್ದು, ಖಾಲಿ ನಿವೇಶನ ಅಥವಾ ಹಳೆಯ ಕಚ್ಚಾ ಮನೆಯನ್ನು ಹೊಂದಿರುವಂತಹವರು ಆದಾಯ ಮತ್ತು ಜಾತಿ ದೃಢೀಕರಣ ಪತ್ರ, ಆಸ್ತಿಯ ಮಾಲೀಕತ್ವದ ಪ್ರಸಕ್ತ ಸಾಲಿನ ಈ ಆಸ್ತಿ(ನಮೂನೆ-3), ಪಡಿತರ ಚೀಟಿ, ಆಧಾರ್ ಕಾರ್ಡ್, ಭಾವಚಿತ್ರ ಹಾಗೂ ಇನ್ನಿತರೆ ಅಗತ್ಯ ದಾಖಲೆ ಪತ್ರಗಳೊಂದಿಗೆ ಅರ್ಹ ಫಲಾನುಭವಿಗಳು ಆಗಸ್ಟ್, 25 ರೊಳಗೆ ನಗರಸಭೆಗೆ ಅರ್ಜಿ ಸಲ್ಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ ಕಚೇರಿಯ ಕೆಲಸದ ವೇಳೆಯಲ್ಲಿ ವಸತಿ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget
error: Content is protected !!
Scroll to Top
%d bloggers like this: