ರಾಜ್ಯದಲ್ಲಿ ಇನ್ನು ಮುಂದೆ ACB ಇಲ್ಲ – ಹೈಕೋರ್ಟ್ ನಿಂದ ಮಹತ್ವದ ಆದೇಶ | ಲೋಕಾಯುಕ್ತಕ್ಕೆ ಮತ್ತೆ ಪವರ್

ಎಸಿಬಿ ರಚನೆಯನ್ನು ರದ್ದು ಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ರದ್ದು ವಿಚಾರಕ್ಕೆ ಸಂಬಂಧಿಸಿ ಎಸಿಬಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಸಂಬಂಧ ಇಂದು ( ಗುರುವಾರ) ತೀರ್ಪು ಪ್ರಕಟಗೊಂಡಿದೆ. ಹೈಕೋರ್ಟ್ ಎಸಿಬಿ ರಚನೆ ಆದೇಶ ರದ್ದುಪಡಿಸಿದೆ.

ಈ ಕುರಿತು ಚಿದಾನಂದ ಅರಸ್, ಬೆಂಗಳೂರು ವಕೀಲರ ಸಂಘ ಹಾಗೂ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು, ಜಾತಿ ಆಧರಿಸಿ ಲೋಕಾಯುಕ್ತ ಉಪಲೋಕಾಯುಕ್ತ ನೇಮಕವಾಗಬಾರದು. ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು ಎಂದು ಸರ್ಕಾರದ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ನೀಡಿದೆ.

ಇನ್ನು ಹೈಕೋರ್ಟ್‌ ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ಮರುಸ್ಥಾಪಿಸಿದೆ. ಎಲ್ಲಾ ಪ್ರಕರಣಗಳೂ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.

Leave A Reply

Your email address will not be published.