ರಾಜ್ಯಾದ್ಯಂತ ಇನ್ನು ಮುಂದೆ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್ ಘೋಷಣೆ

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ, ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

 

ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮಾತನಾಡಿ, “ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಎಲ್ಲರೂ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿಲ್ಲ. ಈ ಸೋಂಕಿನ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದ್ದು, ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಹೆಚ್ಚಳವಾಗುತ್ತಿರುವಂತ ಮಲೇರಿಯಾ ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಈ ಸಂದರ್ಭದಲ್ಲಿ ಸುಧಾಕರ್ ಹೇಳಿದ್ದಾರೆ.

Leave A Reply

Your email address will not be published.