ನಾಳೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳೇ ಈ ನಿಯಮ ಪಾಲನೆ ಕಡ್ಡಾಯ
2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08 2022ರವರೆಗೆ ನಡೆಯಲಿದೆ. ಹಾಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವೊಂದು ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳ್ಳಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಇನ್ನೂ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ದ್ವೀತಿಯ ಪಿಯು ಪೂರಕ ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳು ಕೊಂಡೊಯ್ಯಲು ಯಾವುದೇ ಅವಕಾಶವಿಲ್ಲ.
ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಈ ವಲಯದ ಒಳಗೆ ಪರೀಕ್ಷಾರ್ಥಿಗಳು ಮತ್ತು ಸಂಬಂಧಪಟ್ಟವರನ್ನು ಹೊರತುಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲ.
ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಸದಸ್ಯರಾಗಿರುವರು. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತು ಕೂಡ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ. ಆಗಸ್ಟ್ 12 ರಿಂದ ಆಗಸ್ಟ್ 25 ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ ಪರೀಕ್ಷೆಗೆ ತೆರಳಲು ಮಾತ್ರ ಈ ಉಚಿತ ಬಸ್ ಪ್ರಯಾಣದ ಅವಕಾಶವಿದೆ. ಅಂದರೆ ಪರೀಕ್ಷಾ ಅವಧಿಯಲ್ಲಿ ಮಾತ್ರ ವಿದ್ಯಾರ್ಥಿಗಳು ಈ ಉಚಿತ ಬಸ್ ಪ್ರಯಾಣದ ಸೇವೆ ಪಡೆಯಬಹುದು.
ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆ ಎಸ್ ಆರ್ ಟಿಸಿ ನಿಗಮವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದು, ಈ ಸೌಲಭ್ಯವನ್ನು ಸದುಪಯೋಗಪಡಸಿಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಈ ರೀತಿ ಇದೆ
ದಿನಾಂಕ 12-08-2022 – ಕನ್ನಡ, ಅರೇಬಿಕ್
ದಿನಾಂಕ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ದಿನಾಂಕ 16-08-2022 – ಹಿಂದಿ
ದಿನಾಂಕ 17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ದಿನಾಂಕ 18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ
ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 19-08-2022 -ಸ ರಾಜ್ಯ ಶಾಸ್ತ್ರ ಗಣಿತ ಶಾಸ್ತ್ರ
ದಿನಾಂಕ 20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ದಿನಾಂಕ 22-08-2022 – ಇಂಗ್ಲೀಷ್
ದಿನಾಂಕ 23-08-2022 – ಅರ್ಥಶಾಸ್ತ್ರ, ಜೀವಶಾಸ್ತ್ರ
ದಿನಾಂಕ 24-08-2022-ಇತಿಹಾಸ, ಸಂಖ್ಯಾಶಾಸ್ತ್ರ
ದಿನಾಂಕ 25-08-2022 – ಸಮಾಜಶಾಸ್ತ್ರ ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ