ತೇಜಸ್ವಿ ಸೂರ್ಯ ಬೆಂಬಲಿಗರಿಂದ ದೇವಸ್ಥಾನದಲ್ಲಿ ಬ್ಯಾರಿಕೇಡ್ ಮುರಿದು, ಸೆಕ್ಯುರಿಟಿಗಳ ಮೇಲೆ ಹಲ್ಲೆ

ಸೂರ್ಯ ಶ್ರಾವಣ ಮಾಸದ ಪ್ರಯುಕ್ತ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಬಂದಿದ್ದರು. ತೇಜಸ್ವಿ ಸೂರ್ಯ ದೇವಾಲಯಕ್ಕೆ ಪ್ರವೇಶಿಸಲು ಅನುಮತಿ ನೀಡಲಾಯಿತು. ಆದರೆ, ಅವರ ಬೆಂಬಲಿಗರಿಗೆ ಪ್ರವೇಶ ನಿರಾಕರಿಸಿದ್ದರಿಂದ ದೇವಸ್ಥಾನದಲ್ಲಿ ಗಲಭೆ ಉಂಟಾಯಿತು.

ಶ್ರಾವಣ ಮಾಸವಾದ್ದರಿಂದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಸೇರಿದ್ದರು. ಹಾಗಾಗಿ, ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ದೇವರ ದರ್ಶನಕ್ಕೆ ಮೊದಲು ಅವಕಾಶ ನೀಡುವ ಉದ್ದೇಶದಿಂದ ತೇಜಸ್ವಿ ಸೂರ್ಯ ಅವರ ಬೆಂಬಲಿಗರಿಗೆ ನೇರವಾಗಿ ದೇವಸ್ಥಾನದೊಳಗೆ ಪ್ರವೇಶಿಸಲು ನಿರಾಕರಿಸಲಾಯಿತು. ಸ್ಥಳೀಯ ವರದಿಗಳ ಪ್ರಕಾರ, ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಪ್ರಯತ್ನಿಸಿದಾಗ, ಅವರನ್ನೂ ತಳ್ಳಿ ಹಲ್ಲೆ ನಡೆಸಲಾಯಿತು.


Ad Widget

Ad Widget

Ad Widget

Ad Widget

Ad Widget

Ad Widget

ಮಹಾಕಾಳೇಶ್ವರ ದೇವಾಲಯವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ ಮತ್ತು ಶಿವಭಕ್ತರ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಈ ದೇಗುಲಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ವಿಶೇಷವಾಗಿ ಶ್ರಾವಣ ಮಾಸದಲ್ಲಿ ದೇವಸ್ಥಾನದ ಆವರಣವು ಭಕ್ತರಿಂದ ತುಂಬಿ ತುಳುಕುತ್ತಿರುತ್ತದೆ. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದ ಗರ್ಭಗುಡಿಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ.

error: Content is protected !!
Scroll to Top
%d bloggers like this: