ಅಕ್ರಮ- ಸಕ್ರಮ ತಿಂಗಳೊಳಗೆ ಆರಂಭ

ಅಕ್ರಮ ಸಕ್ರಮ ಯೋಜನೆಗೆ ಸಂಬಂಧಪಟ್ಟಂತೆ ಕರಡು ಅಧಿಸೂಚನೆ ಸಿದ್ಧವಾಗಿದ್ದು, ಈ ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು. ಜನರಿಗೆ ಅನುಕೂಲವಾಗುವ ಹಾಗೂ ಹೊರೆ ಆಗದ ರೀತಿಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೈರತಿ ಬಸವರಾಜ ತಿಳಿಸಿದ್ದಾರೆ.

 

ಬೆಂಗಳೂರು ಹೊರತುಪಡಿಸಿ ಉಳಿದ ಮಹಾನಗರಗಳಿಗೆ ಸಂಬಂಧಿಸಿದ ‘ಅಕ್ರಮ-ಸಕ್ರಮ’ಯೋಜನೆ ಸಂಬಂಧ ಕರಡು ಅಧಿಸೂಚನೆ ಸಿದ್ಧವಾಗಿದ್ದು, ಆದಷ್ಟು ಬೇಗ ತೀರ್ಮಾನ ಆಗಲಿದೆ ಎಂದು ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ-ಸಕ್ರಮಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದರಿಂದ, ರಾಜಧಾನಿಯನ್ನು ಹೊರತುಪಡಿಸಿ ಉಳಿದ ಕಡೆ ಜಾರಿಗೆ ತರಲಾಗುವುದು. ಕಾನೂನು ಸಚಿವ ಮಾಧುಸ್ವಾಮಿ ಅವರ ಜೊತೆ ಕೆಲವೊಂದು ವಿಷಯಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ತಿಂಗಳೊಳಗೆ ಜಾರಿ ಮಾಡಲಾಗುವುದು ಎಂದರು.

‘ಅಕ್ರಮ-ಸಕ್ರಮ’ ಯೋಜನೆ ಸಂಬಂಧ ಈಗಾಗಲೇ ಸಂಪುಟ ಉಪಸಮಿತಿ ಸಭೆ ಸೇರಿ ಹಲವು ಬಾರು ಚರ್ಚೆ ಮಾಡಲಾಗಿದೆ. ಕೇವಲ ಮನೆಗಳನ್ನು ಮಾತ್ರ ಸಕ್ರಮ ಮಾಡಬೇಕೆ, ವಾಣಿಜ್ಯ ಕಟ್ಟಡಗಳನ್ನು ಸಕ್ರಮ ಮಾಡಬೇಕೆ ಎಂಬ ಬಗ್ಗೆ ಚರ್ಚೆ ನಡೆದಿದೆ. ಅಕ್ರಮ-ಸಕ್ರಮಕ್ಕೆ ಕೊನೆಯ ದಿನಾಂಕ ನಿಗದಿಪಡಿಸುವುದು ಬೇಡ ಎಂಬ ಅಭಿಪ್ರಾಯ ಬಂದಿದೆ. ಜೊತೆಗೆ ಇನ್ನೂ ಕೆಲವು ಸಣ್ಣ ಪುಟ್ಟ ವಿಷಯಗಳ ಬಗ್ಗೆ ಸಮಾಲೋಚಿಸಬೇಕಾಗಿದೆ. ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವ ಉದ್ದೇಶವಿದೆ ಎಂದು ಹೇಳಿದರು.

Leave A Reply

Your email address will not be published.