ಪ್ರವೀಣ್ ಹಂತಕರ ಬಂಧನ : ಪೋಲಿಸ್ ಇಲಾಖೆಗೆ ಹಾಗೂ ಸರಕಾರಕ್ಕೆ ಸುಳ್ಯ ಮಂಡಲ ಬಿಜೆಪಿ ಅಭಿನಂದನೆ

ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಕರ್ನಾಟಕದ ಪೋಲಿಸ್ ಇಲಾಖೆಗೆ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿಯು ಅಭಿನಂದನೆಗಳನ್ನು ಸಲ್ಲಿಸಿದೆ. ಅಲ್ಲದೆ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ADGP ಅಲೋಕ್ ಕುಮಾರ್ ರವರನ್ನು ನಿಯೋಜಿಸಿ ಕೊಲೆಯ ಆರೋಪಿಗಳನ್ನು ಬಂಧಿಸುವಲ್ಲಿ ಸೂಕ್ತ ಮಾರ್ಗದರ್ಶನ ನೀಡಿದ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವದ್ವಯರಾದ ಎಸ್ ಅಂಗಾರ ಹಾಗೂ ಸುನಿಲ್ ಕುಮಾರ್ ರವರಿಗೂ ಮಂಡಲ ಬಿಜೆಪಿಯು ಅಭಿನಂದನೆಗಳನ್ನು ಸಲ್ಲಿಸಿದೆ
ಹತ್ಯೆಯ ಸ್ಕೆಚ್ ಹಾಕಿದ, ಆರೋಪಿಗಳಿಗೆ ನೆರವು ನೀಡಿದ, ಆರೋಪಿಗಳು ತಪ್ಪಿಸಿಕೊಳ್ಳಲು ಸಹಕರಿಸಿದ ಹಾಗೂ ಹತ್ಯೆಯಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ಯಶಸ್ವಿಯಾಗಿದೆ. ಆರೋಪಿಗಳ ಬಂಧನದೊಂದಿಗೆ ಜಿಹಾದಿ ಮಾನಸಿಕತೆಯ ಶಕ್ತಿಗಳು ಸುಳ್ಯದಂತಹ ಗ್ರಾಮೀಣ ಭಾಗದಲ್ಲಿಯೂ ಕ್ರಿಯಾಶೀಲರಾಗಿರುವುದು ಬಯಲಾಗಿದೆ. ಹಾಗಾಗಿ ರಾಷ್ಟ್ರೀಯ ತನಿಖಾ ದಳವು ಈ ಕುರಿತು ಸಮಗ್ರ ತನಿಖೆ ನಡೆಸಿ ಇಂತಹ ಮತಾಂಧ ಜಿಹಾದಿ ಮಾನಸಿಕತೆಯನ್ನು ಬೆಳೆಸಲು ಸಹಕರಿಸಿದ ಸಂಘಟನೆಗಳ ಷಡ್ಯಂತ್ರವನ್ನು ಬಯಲಿಗೆಳೆದು ಇಂತಹ ಕೊಲೆಗಳಿಗೆ ಆರ್ಥಿಕ ಸಹಕಾರ ನೀಡುತ್ತಿರುವ ವ್ಯಕ್ತಿಗಳನ್ನು ಕೂಡ ಬಂಧಿಸಿ ಅವರ ಅಸ್ತಿಪಾಸ್ತಿಗಳನ್ನು ಮುಟ್ಟುಗೊಲು ಹಾಕುವ ಮೂಲಕ ದೇಶದ್ರೋಹಿ ಶಕ್ತಿಗಳನ್ನು ಮಟ್ಟ ಹಾಕಬೇಕೆಂದು ಮಂಡಲ ಬಿಜೆಪಿಯು ಆಗ್ರಹಿಸುತ್ತದೆ ಎಂದು ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ
ಹರೀಶ್ ಕಂಜಿಪಿಲಿ,ಪ್ರಧಾನ ಕಾರ್ಯದರ್ಶಿಗಳಾದ
ರಾಕೇಶ್ ರೈ ಕೆಡೆಂಜಿ,ಸುಬೋಧ್ ಶೆಟ್ಟಿ ತಿಳಿಸಿದ್ದಾರೆ.

 

Leave A Reply

Your email address will not be published.