PU ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರೇ ನಿಮಗೊಂದು ಮಹತ್ವದ ಮಾಹಿತಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಿದಂತ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಗುರುತಿಸಿ, ಗೌರವಿಸುವಂತ ಕಾರ್ಯಕ್ಕೆ ಇಳಿದಿದೆ. ಹೀಗಾಗಿಯೇ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯ ಮಾಹಿತಿ ನೀಡಿದ್ದು, ಇಲಾಖೆಯು 2021-22ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪ್ರಾಂಶುಪಾಲರು, ಉಪನ್ಯಾಸಕರನ್ನು ಆಯ್ಕೆ ಮಾಡಲಿದ್ದು, ಈ ಬಗ್ಗೆ ಆಸಕ್ತರು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದ್ದಾರೆ.

ಆನ್ ಲೈನ್ ಮೂಲಕ ಉತ್ತಮ ಕಾರ್ಯ ನಿರ್ವಹಿಸಿದಂತ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅರ್ಜಿ ಸಲ್ಲಿಸಲು ಕೊನೆ ದಿನಾಂಕ 20-08-2022 ಆಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಜಾಲತಾಣ www.pue.karnataka.gov.in ಸಂಪರ್ಕಿಸುವಂತೆ ತಿಳಿಸಿದ್ದಾರೆ.

Leave A Reply

Your email address will not be published.