ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಿದ್ದು, ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಇನ್ನು ಈ ವಾರ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಪ್ರಮುಖ ಅಧಿಸೂಚನೆಗಳ ಪಟ್ಟಿ ಇಲ್ಲಿದೆ. ಈ ಮೂಲಕ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಿ, ತಯಾರಿ ನಡೆಸಬಹುದಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಮತ್ತು ಅಕೌಂಟೆಂಟ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 48 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆಫ್ಲೈನ್ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 28 ಆಗಿದೆ.
ಅಧಿಕೃತ ವೆಬ್ ಸೈಟ್ : nia.gov.in
ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ನಲ್ಲಿ ಕನ್ಸಲ್ಟೇಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 58 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಯಾವುದೇ ಮೂಲೆಯಲ್ಲಿ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 18 ಆಗಿದೆ.
ಅಧಿಕೃತ ವೆಬ್‌ಸೈಟ್: dgca.nic.in
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಸಿನೆಸ್ ಮ್ಯಾನೇಜರ್, ಗುತ್ತಿಗೆ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಇ ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 20 ಆಗಿದೆ.
ಅಧಿಕೃತ ವೆಬ್‌ಸೈಟ್: ndri.res.in
ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ನಲ್ಲಿ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 189 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 11 ಆಗಿದೆ.
ಅಧಿಕೃತ ವೆಬ್‌ಸೈಟ್: nalcoindia.com