CSG Recruitment 2022: ಖಾಲಿ ಇರುವ 128 ಹುದ್ದೆಗಳಿಗೆ ಅರ್ಜಿ ಆಹ್ವಾನ| ಈ ಕೂಡಲೇ ಅರ್ಜಿ ಸಲ್ಲಿಸಿ

ಮಾಹಿತಿ ತಂತ್ರಜ್ಞಾನ (ಐಟಿ/ಐಸಿಟಿ) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಒಟ್ಟು 128 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅಭ್ಯರ್ಥಿಗಳು ಆಗಸ್ಟ್ 12,2022 ರಿಂದ ಆಗಸ್ಟ್ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ :
ಪ್ರಾಜೆಕ್ಟ್ ಮ್ಯಾನೇಜರ್ – 6 ಹುದ್ದೆಗಳು
ಪ್ರಾಜೆಕ್ಟ್ ಲೀಡ್ – 10 ಹುದ್ದೆಗಳು
ಬಿಸಿನೆಸ್ ಅನಲಿಸ್ಟ್ – 4 ಹುದ್ದೆಗಳು
ಸೊಲ್ಯೂಷನ್ ಆರ್ಕಿಟೆಕ್ಟ್ – 2 ಹುದ್ದೆಗಳು
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ – 9 ಹುದ್ದೆಗಳು
ಸಾಫ್ಟ್‌ವೇರ್ ಇಂಜಿನಿಯರ್ – 73 ಹುದ್ದೆಗಳು
ಡೇಟಾಬೇಸ್ ಡಿಸೈನರ್ – 5 ಹುದ್ದೆಗಳು ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ – 2 ಹುದ್ದೆಗಳು
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ – 2 ಹುದ್ದೆಗಳು
ಟೆಸ್ಟ್ ಇಂಜಿನಿಯರ್ – 12 ಹುದ್ದೆಗಳು
ಆಪರೇಷನ್ಸ್ ಮ್ಯಾನೇಜರ್ – 3 ಹುದ್ದೆಗಳು

ಒಟ್ಟು 128 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ : ಈ ವಿವಿಧ ಹುದ್ದೆಗಳಿಗೆ ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ : ಈ ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಭ್ಯರ್ಥಿಗಳನ್ನು ನೇರ ಸಂದರ್ಶನ, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ : ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://csg.karnataka.gov.in/ ಗೆ ಭೇಟಿ ನೀಡಿ,  ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ, ನಂತರ ತಮ್ಮ ಸಿವಿಯನ್ನು careerscsg@karnataka.gov.in ವಿಳಾಸಕ್ಕೆ ಕಳುಹಿಸಿ.

Leave A Reply

Your email address will not be published.