ಟಿಪ್ಪು ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ!! ಪುನೀತ್ ಕೆರೆಹಳ್ಳಿ ಸಹಿತ ಮೂವರ ಬಂಧನ!
ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸಹಿತ ಮೂವರು ಕಾರ್ಯಕರ್ತರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು, ವಿಚಾರಣೆಯ ಬಳಿಕ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಆಗಸ್ಟ್ 13 ರಂದು ಬೆಂಗಳೂರು ಕೆ.ಆರ್ ವೃತ್ತದಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಗಳನ್ನು ಪುನೀತ್ ಕೆರೆಹಳ್ಳಿ ಹಾಗೂ ಸ್ನೇಹಿತರು ಸೇರಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಅದಲ್ಲದೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು.
ಈ ಬಗ್ಗೆ ಕಾಂಗ್ರೆಸ್ ಮುಖಂಡ ಮಂಜುನಾಥ್ ಎಂಬವರು ಬೆಂಗಳೂರು ಹಾಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಳಿಸಿದ್ದರು.ಈ ಬಗ್ಗೆ ವಿಚಾರಣೆಗಿಳಿದ ಪೊಲೀಸರ ತಂಡ ಮೂವರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದರು.
ಅಂದು ಘಟನೆಯಲ್ಲಿ ಭಾಗಿಯಾಗಿದ್ದ ಪುನೀತ್ ಕೆರೆಹಳ್ಳಿ, ಅನಂತ್ ರಾವ್, ಕಿರಣ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು,ವಿಚಾರಣೆಯ ಬಳಿಕ ಮೂವರನ್ನು ಬಂಧಸಿದ್ದಾರೆ ಎಂದು ತಿಳಿದು ಬಂದಿದೆ.
ಪುನೀತ್ ಕೆರೆಹಳ್ಳಿ ಹಾಗೂ ಅವರ ಕಾರ್ಯಕರ್ತರು ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಹಾಗೂ ಹತ್ಯೆ ಪ್ರಕರಣದಲ್ಲಿ ಕೇಳಿಬಂದಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದ್ದು, ಅಲ್ಲದೇ ಎಸ್ಪಿ ಕಚೇರಿ ಚಲೋ ನಡೆಸುವ ಎಚ್ಚರಿಕೆ ನೀಡುವ ಮೂಲಕ ದಕ ಜಿಲ್ಲೆಯಲ್ಲಿ ಹೊಸ ಸಂಚಲನ ಸೃಸ್ಟಿಸಿದ್ದರು.