ಮಂಗಳೂರಿನಲ್ಲೂ ವೀರ್ ಸಾರ್ವಕರ್ ಫೋಟೋ ವಿವಾದ!!!

ಮಂಗಳೂರು : ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫೋಟೋ ಗಲಾಟೆ ವಿವಾದ ಇನ್ನೂ ತಣ್ಣಗಾಗಿಲ್ಲ. ಈಗ ಇದರ ಬೆನ್ನಲ್ಲೇ ಮಂಗಳೂರಿನಲ್ಲೂ ಸಹ ಸಾವರ್ಕರ್ ಫೋಟೋ ಸಂಬಂಧ ಗಲಾಟೆಯಾಗಿದೆ.

 

ಇಂದು ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗುರುಪುರ ಗ್ರಾಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗುರುಪುರ ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ನೃತ್ಯ ಮಾಡಿದರು. ನೃತ್ಯದ ವೇಳೆ ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಾರೆ. ಈ ವೇಳೆ SDPI ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಕಿರಿಕ್ ಮಾಡಿದ್ದಾರೆ. ಗ್ರಾ.ಪಂ. ಸಿಬ್ಬಂದಿ ಜೊತೆ SDPI ಮುಖಂಡರು ವಾಗ್ವಾದ ನಡೆಸಿದ್ದಾರೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Leave A Reply

Your email address will not be published.