ಭೀಕರ ರಸ್ತೆ ಅಪಘಾತ: ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವು

Share the Article

ಟೆಂಪೋ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಒಂದೇ ಕುಟುಂಬದ ಐವರು ಸೇರಿ ಒಟ್ಟು ಆರು ಮಂದಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಂಭವಿಸಿದೆ.

ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನುಜ್ಜು ಗುಜ್ಜಾಗಿದ್ದು ಕ್ರೇನ್ ಮೂಲಕ ಬೇರ್ಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್‌ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ.

ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ನಿನ್ನೆ ಮುಂಜಾನೆ 5.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ.

Leave A Reply