ಮುಂದಿನ ಸಿಎಂ ನಾನು ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ!!!

ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಜೆಡಿಎಸ್ ಸರ್ಕಾರ ರಚಿಸಲಿದ್ದು, ಹಾಗಾಗಿ ನಾನು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

 

ಜೆಡಿಎಸ್ ಭದ್ರಕೋಟೆಯಾದ ರಾಜರಾಜೇಶ್ವರಿ ನಗರ ಕ್ಷೇತ್ರ ನಮ್ಮದೇ ಆದ ತಪ್ಪಿನಿಂದ ಸೋಲು ದೊರಕಿದ್ದು. ಆ ಹಿಂದಿನ ತಪ್ಪುಗಳನ್ನು ತಿದ್ದಿಕೊಳ್ಳಲು, ಇದೀಗ ಯುವಕರಿಗೆ ಅವಕಾಶ ನೀಡಬೇಕಿದೆ ಎಂದರು. ಬಿಬಿಎಂಪಿ ವಾರ್ಡ್‌ಗಳ ಮೀಸಲಾತಿಯನ್ನು ಬಿಜೆಪಿ ಸಚಿವರು ತಮಗೆ ಬೇಕಾದಂತೆ ಪ್ರಕಟಿಸಿಕೊಂಡು ನಮ್ಮ ಶಕ್ತಿ ಕುಂದಿಸುವ ಹುನ್ನಾರ ನಡೆಸಿದ್ದಾರೆ. ಇದಕ್ಕೆ ನಾವು ತಕ್ಕ ಉತ್ತರ ನೀಡಬೇಕಿದೆ ಎಂದು ದಾಸರಹಳ್ಳಿ ಕ್ಷೇತ್ರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಮಾತನಾಡುತ್ತಾ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಆರ್. ಮಂಜುನಾಥ್, ಪಾಲಿಕೆ ಚುನಾವಣೆಯಲ್ಲಿ ದಾಸರಹಳ್ಳಿ ಕ್ಷೇತ್ರದ 12ಕ್ಕೆ 12 ವಾರ್ಡ್ ಗಳನ್ನು ಜೆಡಿಎಸ್ ಗೆಲ್ಲಲೇಬೇಕು ಎಂದು ಪಣ ತೊಟ್ಟಿದ್ದೇನೆ ಎಂದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್, ಮಹಿಳಾ ಘಟಕದ ಅಧ್ಯಕ್ಷೆ ರಾಣಿ ಪ್ರತಾಪ್, ವಕ್ತಾರ ಮುಕುಂದರಾಜ್, ಮಾಧ್ಯಮ ಕಾರ್ಯದರ್ಶಿ ಪಿ.ಕೆ. ಚನ್ನಕೃಷ್ಣ ಇತರರಿದ್ದರು.

Leave A Reply

Your email address will not be published.