ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ!! ಆಸ್ಪತ್ರೆಗೆ ಸಾಗಿಸುವ ವೇಳೆ ಮೃತ್ಯು!

Share the Article

ಕುಟ್ರುಪಾಡಿ ಗ್ರಾಮ ಪಂಚಾಯತ್ ವತಿಯಿಂದ ಕಡಬ ಹಳೇ ಸ್ಟೇಷನ್ ಅಮೃತ ಸರೋವರದ ಬಳಿ ನಡೆಯುತ್ತಿದ್ದ ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಮಾಜಿ ಯೋಧ ಗಂಗಾಧರ ಗೌಡ ಹಳ್ಳಿ ಎಂದು ಗುರುತಿಸಲಾಗಿದೆ. ಧ್ವಜಾರೋಹಣ ನೆರವೇರಿಸಲು ಹಾಗೂ ಧ್ವಜ ವಂದನೆಯ ಮಾಹಿತಿ ನೀಡಿ, ಇನ್ನೇನು ಧ್ವಜಾರೋಹಣಕ್ಕೆ ಅಣಿಯಾಗುವ ವೇಳೆಗೆ ಕುಸಿದು ಬಿದ್ದರು.

ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗಿದ್ದು, ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತ ನಿವೃತ್ತ ಯೋಧನ ಅಂತಿಮ ಯಾತ್ರೆಯು ಕಡಬ ಪೇಟೆಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Leave A Reply