ತೆರಿಗೆ ವಿನಾಯ್ತಿ ಕೈ ಬಿಟ್ಟ ಕೇಂದ್ರ ಸರ್ಕಾರ!?

ನವದೆಹಲಿ: ವಿನಾಯ್ತಿ ಮುಕ್ತ ತೆರಿಗೆ ಪದ್ಧತಿ ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಮೂಲಕ ತೆರಿಗೆ ವಿನಾಯ್ತಿಗಳನ್ನು ಕೈಬಿಟ್ಟು ಗೊಂದಲ ತೊಡೆದುಹಾಕಲಿದೆ.

 

ವಿನಾಯ್ತಿ ಬೇಡ ಎಂದವರಿಗೆ ಆದಾಯ ತೆರಿಗೆ ದರವನ್ನು ಕಡಿಮೆಮಾಡಲು ಕೇಂದ್ರ ವಿತ್ತ ಸಚಿವಾಲಯ ಹೊಸ ಪ್ರಸ್ತಾವ ಇರಿಸಿದ್ದು, ಈ ಮೂಲಕ ಗೊಂದಲಮುಕ್ತ ಹಾಗೂ ಆಕರ್ಷಕ ಆದಾಯ ತೆರಿಗೆ ಪದ್ಧತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರ ಸರ್ಕಾರ 2020-21ರಲ್ಲಿ  ಹೊಸ ತೆರಿಗೆ ಪದ್ಧತಿಯೊಂದನ್ನು ಜಾರಿಗೆ ತಂದಿತ್ತು. ಅದರಲ್ಲಿ ಮೊದಲ ವಿಧಾನದಲ್ಲಿ ಹಲವಾರು ತೆರಿಗೆ ವಿನಾಯ್ತಿ ಇರುತ್ತಿದ್ದವು. 2ನೇ ವಿಧಾನದಲ್ಲಿ ಯಾವುದೇ ತೆರಿಗೆ ವಿನಾಯ್ತಿ ಇರುತ್ತಿರಲಿಲ್ಲ. ಆದರೆ ಮೊದಲನೆಯ ವಿಧಕ್ಕೆ ಹೋಲಿಸಿದರೆ ಈ ವಿಧದಲ್ಲಿ ಕಡಿಮೆ ಪ್ರಮಾಣದ ತೆರಿಗೆ ಇತ್ತು. ತೆರಿಗೆದಾರರು ತಮಗೆ ಇಷ್ಟವಾದ ವಿಧಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿತ್ತು. ಆದರೆ ಈಗ ಗೊಂದಲ ತೊಡೆದುಹಾಕುವ ನಿಟ್ಟಿನಲ್ಲಿ ವಿನಾಯ್ತಿ ಮುಕ್ತ ತೆರಿಗೆ ಪದ್ಧತಿಗೆ ಸರ್ಕಾರ ಮುಂದಾಗಿದೆ.

Leave A Reply

Your email address will not be published.