ರಾಜ್ಯದಲ್ಲಿ ಮುಂದುವರಿದ ಸಾವರ್ಕರ್ V/s ಟಿಪ್ಪು ಫ್ಲೆಕ್ಸ್ ಫೈಟ್ ಶುರು | ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು!!!

ತುಮಕೂರು : ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಗಲಾಟೆ ಪ್ರಕರಣ ತಣ್ಣಗಾಗಿಲ್ಲ. ಫ್ಲೆಕ್ಸ್ ಗಲಾಟೆ ತುಮಕೂರಿಗೂ ತುಂಬಿದೆ. ತುಮಕೂರಿನಲ್ಲಿ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಗೆ ಕತ್ತರಿ ಹಾಕಿರುವ ಘಟನೆ ನಡೆದಿದೆ.

 

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿ 80 ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವಿರುವ ಪ್ಲೆಕ್ಸ್ ಅನ್ನು ಬಿಜೆಪಿ ಶಾಸಕ ಜ್ಯೋತಿಗಣೇಶ್ ಹಾಕಿಸಿದ್ದರು. ಮೂರು ದಿನಗಳ ಹಿಂದೆಯೇ ನಗರದಾದ್ಯಂತ ಪ್ಲೆಕ್ಸ್ ಹಾಕಲಾಗಿತ್ತು. ಆದರೆ ಕಳೆದ ರಾತ್ರಿ ಕಿಡಿಗೇಡಿಗಳು, ಸಾವರ್ಕರ್ ಇರುವ ಪ್ಲೆಕ್ಸ್ ಮಾತ್ರ ಹರಿದು ಹಾಕಿದ್ದಾರೆ. ತುಮಕೂರು ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರಿನ ಎಂಪ್ರೆಸ್ ಕಾಲೇಜಿನ ಬಳಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಾವರ್ಕರ್ ಅವರ ಫ್ಲೆಕ್ಸ್ ಹಾಕಲಾಗಿತ್ತು, ಆದರೆ ಮಧ್ಯರಾತ್ರಿ ಕಿಡಿಗೇಡಿಗಳು ಫ್ಲೆಕ್ಸ್ ಹರಿದು ಪರಾರಿಯಾಗಿದ್ದಾರೆ. ಈ ಮೂಲಕ ಶಿವಮೊಗ್ಗದ ಬಳಿಕ ತುಮಕೂರಿನಲ್ಲೂ ಫ್ಲೆಕ್ಸ್ ಫೈಟ್ ಶುರುವಾಗಿದೆ.
ಶಿವಮೊಗ್ಗದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ಬಿಗುವಿನ ವಾತಾವಣವಿದೆ.

ಅಲ್ಲದೇ ಎರಡು ಕಡೆಗಳಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಮತ್ತಷ್ಟು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Leave A Reply

Your email address will not be published.