ಬಿಹಾರ ಸರ್ಕಾರದ ರಚನೆ ಬೆನ್ನಲ್ಲೇ ಶಾಕಿಂಗ್ ನ್ಯೂಸ್ ಬಹಿರಂಗ | ನಿತೀಶ್ ಕುಮಾರ್ ಸೇರಿ 72 % ಮಂತ್ರಿಗಳು ಕ್ರಿಮಿನಲ್ಸ್ ?!
ಪಟ್ನಾ : ಬಿಹಾರದಲ್ಲಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ ಶೇ 70ಕ್ಕೂ ಹೆಚ್ಚು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದು ಬಹಿರಂಗಗೊಂಡಿದೆ. ಬಿಜೆಪಿ ಜತೆಗಿನ ಮೈತ್ರಿ ಮುರಿದುಕೊಂಡು ಆರ್‌ಜೆಡಿ, ಕಾಂಗ್ರೆಸ್ ಹಾಗೂ ಇತರ ಎಡಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ನಿತೀಶ್ ಕುಮಾರ್ ಸರ್ಕಾರದ ಬಹುದೊಡ್ಡ ಶಾಕಿಂಗ್ ನ್ಯೂಸ್ ಇದೀಗ ಹೊರಬಂದಿದೆ.
ಹೌದು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ 23 ಸಚಿವರ ಪೈಕಿ 17 ಮಂದಿಯ ಮೇಲೆ ಕ್ರಿಮಿನಲ್ ಕೇಸ್ ಇರುವುದು ಬಹಿರಂಗಗೊಂಡಿದೆ. ನಿನ್ನೆಯಷ್ಟೇ ನಿತೀಶ್ ಕುಮಾರ್ ಬಿಹಾರದಲ್ಲಿ ಹೊಸ ಸರ್ಕಾರ ರಚಿಸಿದ್ದಾರೆ. 31 ಶಾಸಕರು, ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ಆರ್‌ಜೆಡಿಯ 16, ಜೆಡಿಯುನ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಪಡೆದಿದ್ದಾರೆ. ಉಳಿದಂತೆ ಕಾಂಗ್ರೆಸ್‌ನ ಇಬ್ಬರು ಹಾಗೂ ಹಿಂದೂಸ್ತಾನ ಅವಾನಿ ಮೋರ್ಚಾದ ಓರ್ವ ಶಾಸಕನಿಗೆ ಸಚಿವ ಸ್ಥಾನ ಸಿಕ್ಕಿದೆ.ಇದರ ಬೆನ್ನಲ್ಲೇ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಶಾಕಿಂಗ್ ನ್ಯೂಸ್ ಕೊಟ್ಟಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಸಹ ಪ್ರಕರಣ ದಾಖಲಾಗಿರುವುದಾಗಿ ಎಡಿಆರ್ ತಿಳಿಸಿದೆ. ಕುತೂಹಲದ ಸಂಗತಿ ಎಂದರೆ ಹೊಸ ಕಾನೂನು ಸಚಿವ ಕಾರ್ತಿಕೇಯ ಸಿಂಗ್ ವಿರುದ್ಧ ಅಪಹರಣ ಕೇಸ್ ದಾಖಲಾಗಿದೆ. 2014ರಲ್ಲಿ ಬಿಲ್ಡರ್ ಒಬ್ಬರನ್ನು ಕೊಲೆ ಮಾಡುವ ಸಂಬಂಧ ಅಪಹರಿಸಿರುವ ಆರೋಪ ಇವರ ಮೇಲಿದೆ. ಆದರೆ ಇದು ತಮಗೆ ಗೊತ್ತೇ ಇಲ್ಲ ಎಂದಿದ್ದಾರೆ ನಿತೀಶ್ ಕುಮಾರ್. ಈ ಮಾಹಿತಿ ಪ್ರಕಾರ 23 ಸಚಿವರ ಪೈಕಿ 17 ಮಂತ್ರಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಆರೋಪಗಳಿವೆ.
ಬಿಹಾರ ರಾಜಕಾರಣದಲ್ಲಿ ಬದಲಾವಣೆ ಉಂಟಾಗಿ, ನಿತೀಶ್ ಕುಮಾರ್ ಅವರು ಆರ್‌ಜೆಡಿ ಜತೆ ಕೈಜೋಡಿಸಿ ಮಹಾಘಟಬಂಧನ ಸರ್ಕಾರ ರಚಿಸುತ್ತಿದ್ದಂತೆ ಬಿಜೆಪಿ ವಾಗ್ದಾಳಿ ನಡೆಸಿದೆ. ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ನಾಯಕ, ಕೋರ್ಟ್ ಮುಂದೆ ಹಾಜರಾಗಬೇಕಿದ್ದ ದಿನವೇ ನೂತನ ಕಾನೂನು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು ವಿವಾದ ಸೃಷ್ಟಿಸಿದೆ.