ಮಂಗಳೂರು : ಮಸೂದ್ ಕೊಲೆ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಣೆ!!!

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು.19ರಂದು ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಿ ಸುಳ್ಯ ನಾಯಾಲಯ ಆದೇಶ ನೀಡಿದೆ.

ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾದ ಕಳಂಜದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಕಸ್ಟಡಿಯಲ್ಲಿದ್ದ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಿಸಲಾಗಿದೆ.

ಮಸೂದ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಅಭಿಲಾಷ್, ಸುನಿಲ್ ಕೆ., ಸುಧೀರ್, ಶಿವಪ್ರಸಾದ್, ರಂಜಿತ್ ಬಿ., ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ.ಎಂ. ಅವರ ಮೇಲೆ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಕಸ್ಟಡಿಯಲ್ಲಿದ್ದರು.
ಇಂದು ನ್ಯಾಯಾಂಗ ಕಸ್ಟಡಿಯ ಅವಧಿ ಪೂರ್ಣ ಗೊಂಡ ಹಿನ್ನಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

Leave A Reply