Job Alert : ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರ ಹಲವು ನೇಮಕಾತಿಗಳಿಗೆ ಕೋವಿಡ್ ಹಾಗೂ ಆರ್ಥಿಕ ಮಿತವ್ಯಯದ ಕಾರಣ ತಡೆ ನೀಡಿತ್ತು. ಕೋವಿಡ್ ಚೇತರಿಕೆಯ ನಂತರ ಇದೀಗ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.

ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ದಿನಾಂಕ 13-08 2020 ರಂದು ಆರ್ಥಿಕ ಮಿತವ್ಯಯ ಆದೇಶವನ್ನು ಜಾರಿಗೊಳಿಸಿದ್ದರಿಂದ ಖಾಸಗೀ ಅನುದಾನಿತ ಪದವಿ ಕಾಲೇಜುಗಳಲ್ಲಿ ಬಾಕಿ ಇರುವ ಬೋಧಕ-ಬೋಧಕೇತರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯು ಕ್ರಮ ಕೈಗೊಂಡಿರಲಿಲ್ಲ ಎಂದಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಇದೀಗ ತುರ್ತಾಗಿ ಈ ಹುದ್ದೆಗಳ ಭರ್ತಿಗೆ ಅಗತ್ಯವಿರುವಂತ ಎಲ್ಲಾ ಕ್ರಮ ಕೈಗೊಳ್ಳಬೇಕಾಗಿದೆ. ಹೀಗಾಗಿ ಖಾಲಿ ಹುದ್ದೆಗಳ ಮಾಹಿತಿಯನ್ನು, ಅನುದಾನಿತ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಇನ್ನಿತರೆ ಅಗತ್ಯ ಮಾಹಿತಿಗಳೊಂದಿಗೆ, ಸಂಬಂಧಪಟ್ಟ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಗೆ ಮೂರು ದಿನದೊಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ.

error: Content is protected !!
Scroll to Top
%d bloggers like this: