ಕೊನೆಗೂ ನೆಮ್ಮದಿಯ ನಿಟ್ಟುಸಿರು ಬಿಟ್ಟ ಬಿಸಿಯೂಟ ಕಾರ್ಯಕರ್ತೆಯರು!

ಬೆಂಗಳೂರು: ತಮ್ಮ ಬೇಡಿಕೆ ಈಡೇರುವವರೆಗೂ ಧರಣಿ ಮುಂದುವರಿಸುತ್ತೇವೆ ಎಂದು ಪಟ್ಟು ಹಿಡಿದಿದ್ದ ಬಿಸಿಯೂಟ ಕಾರ್ಯಕರ್ತೆಯರಿಗೆ ಇದೀಗ ನೆಮ್ಮದಿಯ ನೆಟ್ಟುಸಿರು ಬಿಡುವಂತೆ ಆಗಿದೆ.

 

ಹೌದು. ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಳ್ಳಲಾಗಿದೆ. ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಹಿಂಪಡೆಯಲಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಸಂಘಟನೆಯ ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದು, ಬಿಸಿಯೂಟ ಕಾರ್ಯಕರ್ತೆಯರು ಧರಣಿಯನ್ನು ಹಿಂಪಡೆದುಕೊಂಡಿದ್ದಾರೆ.

ಕೆಲಸದಿಂದ 6,500 ಬಿಸಿಯೂಟ ಕಾರ್ಯಕರ್ತೆಯರ ವಜಾಗೊಳಿಸಿದ ಹಿನ್ನೆಲೆ ಫ್ರೀಡಂಪಾರ್ಕ್​​ನಲ್ಲಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರಿ ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳಿಗೆ ಬಿಸಿಯೂಟ ಸ್ಥಗಿತ ಮಾಡಿ, ಸರ್ಕಾರದ ಗಮನಸೆಳೆಯಲು ಈ ರೀತಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಸರ್ಕಾರದ ಈ ಕ್ರಮ ಖಂಡಿಸಿ ಹೋರಾಟ ಕೈಗೊಳ್ಳಲಾಗಿತ್ತು.

ನಿವೃತ್ತಿ ನಂತರ ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಪುಟ್ಟ ಮಕ್ಕಳ ಜೊತೆಗೆ ಸಾವಿರಾರು ಕಾರ್ಯಕರ್ತರು ಧರಣಿ ನಡೆಸಿದ್ದರು. ಇದೀಗ ಇವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.

Leave A Reply

Your email address will not be published.