2021-22ನೇ ಶೈಕ್ಷಣಿಕ ಸಾಲಿನ ‘ಉತ್ತಮ ಪ್ರಾಂಶುಪಾಲ, ಉಪನ್ಯಾಸಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ!
ವಿದ್ಯಾರ್ಥಿಗಳೆಂಬ ಶಿಲೆಯನ್ನು ಕೆತ್ತಿ ಸುಂದರವಾದ ಮೂರ್ತಿ ಮಾಡಲು ಶಿಲ್ಪಿ ಎಂಬ ಶಿಕ್ಷಕ ಸದಾ ಜೊತೆಯಾಗಿರುತ್ತಾನೆ. ಇಂತಹ ಉತ್ತಮವಾದ ಶಿಕ್ಷಕರಿಗೆ ಸರ್ಕಾರ ಘೋಷಿಸಿದೆ ಉತ್ತಮ “ಶಿಕ್ಷಕ ಪ್ರಶಸ್ತಿ”.
ಈ ಪ್ರಶಸ್ತಿಗಾಗಿ, 2021-22ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉತ್ತಮ ಪ್ರಾಂಶುಪಾಲರು, ಉಪನ್ಯಾಸಕರನ್ನು ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, “ಇಲಾಖೆಯು ಪ್ರಥಮ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿರುತ್ತಾರೆ. ವಿದ್ಯಾರ್ಥಿಗಳ ಭವಿಷ್ಯದ ಘಟ್ಟ ಬಹಣ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತವನ್ನು ಸದಾ ಬಯಸುವುದರೊಂದಿಗೆ, ಅವರ ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ಉತ್ತಮ ಮಾರ್ಗದರ್ಶನ ನೀಡುತ್ತಿರುವ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಗುರುತಿಸಿ, ಗೌರವಿಸುವ ಮೂಲಕ ಪ್ರೋತ್ಸಾಹಿಸುವ ಸರ್ಕಾರದ ಇಲಾಖೆಯ ಆಶಯವಾಗಿದೆ” ಎಂದಿದ್ದಾರೆ.
ಶಿಕ್ಷಕರ ದಿನಾಚರಣೆಯಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆದ್ದರಿಂದ ತಮ್ಮ ಜಿಲ್ಲೆಯಿಂದ ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಂತ ಪ್ರಾಂಶುಪಾಲರು, ಉಪನ್ಯಾಸಕರು ಆನ್ ಲೈನ್ ಮೂಲಕ ಇಲಾಖೆಗೆ ಅರ್ಜಿ ಸಲ್ಲಿಸುವಂತೆ ಹೇಳಿದೆ. ಅರ್ಜಿ ಸಲ್ಲಿಸುವಂತಹ ಉಪನ್ಯಾಸಕರು ದಿನಾಂಕ 31-03-2022ಕ್ಕೆ ಕನಿಷ್ಠ 10 ವರ್ಷಗಳ ಬೋಧನಾ ಅನುಭವ ಹೊಂದಿರಬೇಕು. ಪ್ರಾಂಶುಪಾಲರು ಕನಿಷ್ಠ 3 ವರ್ಷ ಉತ್ತಮ ಆಡಳಿತ ನಿರ್ವಹಿಸಿರುವ ಅನುಭವವನ್ನು ಹೊಂದಿರಬೇಕು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 10-08-2022ರಿಂದ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-08-2022 ಆಗಿರುತ್ತದೆ. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯು ದಿನಾಂಕ 23-08-2022ರೊಳಗೆ ಅಂತಿಮಗೊಳಿಸಬೇಕು. ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ 25-08-2022ರೊಳಗೆ ಆಯ್ಕೆ ಪಟ್ಟಿ ಸಿದ್ಧಪಡಿಸಬೇಕು. ದಿನಾಂಕ 26-08-2022ರೊಳಗೆ ಸರ್ಕಾರಕ್ಕೆ ಆಯ್ಕೆ ಪಟ್ಟಿಯನ್ನು ಸಲ್ಲಿಸಲು ಸೂಚಿಸಿದೆ.
ಪ್ರಶಸ್ತಿ ವಿಜೇತರ ಪಟ್ಟಿಯನ್ನು ದಿನಾಂಕ 03-09-2022 ಪ್ರಕಟಿಸಲಾಗುತ್ತದೆ. ದಿನಾಂಕ 05-09-2022ರಂದು ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.