ಹನಿಟ್ರ್ಯಾಪ್ ನಲ್ಲಿ ಸಿಲುಕಿ 50 ಲಕ್ಷ ಕಳೆದುಕೊಂಡ ದಕ್ಷಿಣ ಕನ್ನಡದ ಮುಖಂಡ

ದಕ್ಷಿಣ ಕನ್ನಡ ಜಿಲ್ಲೆಯ ವ್ಯಕ್ತಿಯೋರ್ವರು ಹನಿಟ್ರ್ಯಾಪ್ ಸುಳಿಗೆ ಸಿಲುಕಿದ್ದು, ಈ ಸುಳಿಯಲ್ಲಿ ಬಿದ್ದ ವ್ಯಕ್ತಿ 50 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಜಗನ್ನಾಥ ಶೆಟ್ಟಿ ಅವರು ಮಂಡ್ಯದ ಪ್ರತಿಷ್ಠಿತ ಚಿನ್ನದಂಗಡಿಯ ಮಾಲೀಕರಾಗಿದ್ದಾರೆ.

 

ಜಗನ್ನಾಥ ಶೆಟ್ಟಿ ಅವರು ಮಂಗಳೂರಿಗೆ ತೆರಳೆಂದು ಮಂಡ್ಯದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ, ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಪರೀಕ್ಷೆಗೆಂದು ಅಪಹರಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅಪಹರಿಸಿ ಲಾಡ್ಜ್ ರೂಮ್‌ಗೆ ಕರೆದೊಯ್ದು, ರೂಮ್‌ನಲ್ಲಿ ಯುವತಿಯ ಜೊತೆ ವೀಡಿಯೋ ಚಿತ್ರೀಕರಿಸಿಕೊಂಡು 4 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ.

ಅಂತಿಮವಾಗಿ ಜಗನ್ನಾಥ ಶೆಟ್ಟಿ ಅವರು 50 ಲಕ್ಷ ರೂಪಾಯಿ ನೀಡಿ ತೆರಳಿದ್ದರು ಎನ್ನಲಾಗಿದೆ. ಇತ್ತೀಚೆಗೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದ ಹಿನ್ನಲೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ದೂರಿನ ಆಧಾರದ ಮೇರೆಗೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬುವರನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

Leave A Reply

Your email address will not be published.