Day: August 22, 2022

ಸರಕಾರಿ ನೌಕರರೇ ನಿಮಗೊಂದು ಸಿಹಿ ಸುದ್ದಿ : ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ

ಸರಕಾರಿ ನೌಕರರಿಗೆ ಕೊನೆಗೂ ಗುಡ್ ನ್ಯೂಸ್ ದೊರಕಿದೆ. ತುಟ್ಟಿಭತ್ಯೆ ಹೆಚ್ಚಳವನ್ನು ಶೀಘ್ರದಲ್ಲೇ ಜಾರಿಗೊಳೊಸಲಾಗುತ್ತಿದೆ. ಸೆ.28 ರಂದು ತುಟ್ಟಿಭತ್ಯೆ ಹೆಚ್ಚಳದ ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ವರದಿಯಾಗಿದೆ. ಈ ಮೂಲಕ ಅಕ್ಟೋಬರ್ 1ರಿಂದ ನೌಕರರ ತುಟ್ಟಿಭತ್ಯೆ ಶೇ.38ಕ್ಕೆ ಏರಿಕೆಯಾಗಲಿದೆ. ಅಂದ್ದಾಗೆ, ಈಗಾಗಲೇ ಅರ್ಧವಾರ್ಷಿಕ ಅಂಕಿ-ಅಂಶಗಳನ್ನ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ ಬಿಡುಗಡೆ ಮಾಡಿದೆ. ಇದರಲ್ಲಿ ಸೂಚ್ಯಂಕ 0.2 ಪಾಯಿಂಟ್ ಏರಿಕೆ ಕಂಡು 129.2ಕ್ಕೆ ತಲುಪಿದೆ. ಈ ಸೂಚ್ಯಂಕ ಏರಿಕೆಯಿಂದಾಗಿ ಡಿಎಯಲ್ಲಿ ಶೇ.4ರಷ್ಟು ಏರಿಕೆಯಾಗುವುದು ಗ್ಯಾರಂಟಿ ಎಂದು ತಜ್ಞರು …

ಸರಕಾರಿ ನೌಕರರೇ ನಿಮಗೊಂದು ಸಿಹಿ ಸುದ್ದಿ : ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ Read More »

ವಿಟ್ಲ: ದ್ವಿಚಕ್ರ ವಾಹನ ಅಪಘಾತ: ಸಹಸವಾರ ಮೃತ್ಯು

ವಿಟ್ಲ: ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ ಸಹ ಸವಾರ ಸಾವನ್ನಪ್ಪಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಲ್ನಾಡು ಗ್ರಾಮದ ಕುಡ್ತಮುಗೇರಿನಲ್ಲಿ ನಡೆದಿದೆ. ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರ ಎಂಬವರ ಪುತ್ರ ವಿಕಲಚೇತನರಾಗಿದ್ದ ಚಂದ್ರಹಾಸ (50) ಮೃತ ದುರ್ದೈವಿ. ವಿಟ್ಲದ ಕುಡ್ತಮುಗೇರು ಸಮೀಪ ಬೈಕ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ದ್ವಿಚಕ್ರ ವಾಹನದ ಸಹ ಸವಾರ ವಿಕಲಚೇತನರಾದ ಚಂದ್ರಹಾಸ ರವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ದರೂ …

ವಿಟ್ಲ: ದ್ವಿಚಕ್ರ ವಾಹನ ಅಪಘಾತ: ಸಹಸವಾರ ಮೃತ್ಯು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ!! ಆರೋಪಿಗಳ ಬಂಧನದಲ್ಲಿ ಭಾಗವಹಿಸಿದ್ದ ಪೊಲೀಸರಿಗೆ ಅಭಿನಂದನಾ ಕಾರ್ಯಕ್ರಮ!!

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಅಭಿನಂದನಾ ಕಾರ್ಯಕ್ರಮವು ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ಹತ್ಯೆ ಪ್ರಕರಣದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಿಬ್ಬಂದಿಗಳನ್ನು ಪ್ರಶಂಶನಾ ಪತ್ರ ಸಹಿತ ನಗದು ಬಹುಮಾನ ನೀಡಿ ಗೌರವಿಸಿ, ಸನ್ಮಾನಿಸಿದರು. ಕಳೆದ ಕೆಲ ದಿನಗಳ ಹಿಂದೆ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ …

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ!! ಆರೋಪಿಗಳ ಬಂಧನದಲ್ಲಿ ಭಾಗವಹಿಸಿದ್ದ ಪೊಲೀಸರಿಗೆ ಅಭಿನಂದನಾ ಕಾರ್ಯಕ್ರಮ!! Read More »

BREAKING NEWS: ಮತ್ತೆ ಕಂಪಿಸಿದ ಭೂಮಿ, ಬೆಚ್ಚಿಬಿದ್ದ ಜನತೆ

ಕಳೆದ ಕೆಲ ದಿನಗಳ ಹಿಂದಷ್ಟೇ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಭೂಕಂಪನ ಉಂಟಾಗಿತ್ತು. ಈ ಬೆನ್ನಲ್ಲೇ ಇಂದು ಮತ್ತೆ ಭೂಮಿ ಕಂಪಿಸಿದೆ. ಹೀಗಾಗಿ ಜಿಲ್ಲೆಯ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇಂದು ಮತ್ತೆ ಭೂಕಂಪನ ಉಂಟಾಗಿದೆ. ಸಂಜೆ 4.26ರ ವೇಳೆಯಲ್ಲಿ ಭೂಮಿ ಕಂಪಿಸಿದೆ ಎಂಬುದಾಗಿ ತಿಳಿದು ಬಂದಿದೆ. ಭೂಮಿ ಕಂಪಿಸುತ್ತಿದ್ದಂತೆ ಭಯದಿಂದ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಅಂದಹಾಗೇ ಕಳೆದ ಕೆಲ ದಿನಗಳ ಹಿಂದಷ್ಟೇ ವಿಜಯಪುರ ಜಿಲ್ಲೆಯ ಬಬಲೇಶ್ವರ, ಬಸವನಬಾಗೇವಾಡಿ ಸೇರಿದಂತೆ …

BREAKING NEWS: ಮತ್ತೆ ಕಂಪಿಸಿದ ಭೂಮಿ, ಬೆಚ್ಚಿಬಿದ್ದ ಜನತೆ Read More »

DOUBLE BREAKING | ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಕ್ರೀಡಾಕೂಟದ ವೇಳೆ ಗಲಾಟೆ -ಇಬ್ಬರು ಅರೆಸ್ಟ್ , ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮತ್ತೆ ವಿಸ್ತರಣೆ !

ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪದಲ್ಲಿ ಇಂದು ನಡೆಯುತ್ತಿದ್ದಂತ ವಲಯ ಮಟ್ಟದ ಕ್ರೀಡಾಕೂಟದ ವೇಳೆಯಲ್ಲಿ ಕ್ರೀಡಾಕೂಟ ನೋಡೋದಕ್ಕೆ ಆಗಮಿಸಿದ್ದಂತ ಅನ್ಯಕೋಮಿನ ಎರಡು ಗುಂಪಿನ ನಡುವೆ ಗಲಾಟೆ ನಡೆದು, ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕಃ- 22-08-2022 ರಂದು ಮದ್ಯಾಹ್ನ ಶಿಕಾರಪುರದ ಮಂಚಿನಕೊಪ್ಪ ಗ್ರಾಮದ ವಾಸಿಯಾದ ಅಣ್ಣಪ್ಪ, 20 ವರ್ಷ ಈತನು ಶಿರಾಳಕೊಪ್ಪ ಟೌನ್ ನ ಇಂದಿರಾಗಾಂಧಿ ಸ್ಟೇಡಿಯಂನಲ್ಲಿ …

DOUBLE BREAKING | ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಕ್ರೀಡಾಕೂಟದ ವೇಳೆ ಗಲಾಟೆ -ಇಬ್ಬರು ಅರೆಸ್ಟ್ , ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮತ್ತೆ ವಿಸ್ತರಣೆ ! Read More »

“ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದ್ದು ತಪ್ಪಲ್ಲ” ಆಶ್ಚರ್ಯಕರ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್, ಗಲಿಬಿಲಿಗೊಂಡ ಹಿಂದೂ ಕಾರ್ಯಕರ್ತರು !

ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ರಾಜ್ಯದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ನಡುವೆಯೂ ಸಿದ್ಧರಾಮಯ್ಯ ಮಾಂಸಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ ಎಂಬುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಅಚ್ಚರಿಯ ಹೇಳಿಕೆ ನೀಡಿ ಹಿಂದೂ ಭಕ್ತರಿಗೆ ಗಾಬರಿ ಮೂಡಿಸಿದ್ದಾರೆ. ಆ ಮೂಲಕ ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಸದಾಕಾಲ ಹಿಂದುತ್ವದ ಪರವಾಗಿ ಕಟ್ಟರ್ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಪ್ರಮೋದ್ ಮುತಾಲಿಕ್ ಅವರ ಈ ಹೇಳಿಕೆ ಹಿಂದು ವಲಯಗಳಲ್ಲಿ ಗಲಿಬಿಲಿ ಉಂಟುಮಾಡಿದೆ. …

“ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದ್ದು ತಪ್ಪಲ್ಲ” ಆಶ್ಚರ್ಯಕರ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್, ಗಲಿಬಿಲಿಗೊಂಡ ಹಿಂದೂ ಕಾರ್ಯಕರ್ತರು ! Read More »

ಗಣೇಶ ಹಬ್ಬ ಆಚರಣೆ ಕುರಿತು ಮಾರ್ಗಸೂಚನೆ ಬಿಡುಗಡೆ, ಏನ್ ಮಾಡ್ಬೇಕು, ಏನ್ ಮಾಡಬಾರದು ಡೀಟೇಲ್ಸ್ !

ಗಣೇಶ ಹಬ್ಬದ ಪ್ರಯುಕ್ತ ಹೊಸ ಮಾರ್ಗಸೂಚಿ ಬಂದಿದೆ. ರಾಜ್ಯದಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/072016 ರಂದು ಹೊರಡಿಸಿದೆ. ಅಲ್ಲದೆ ನಮ್ಮ ರಾಜ್ಯಕ್ಕೆ ಬೇರೆ ರಾಜ್ಯದಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್‍ಪೋಸ್ಟ್ …

ಗಣೇಶ ಹಬ್ಬ ಆಚರಣೆ ಕುರಿತು ಮಾರ್ಗಸೂಚನೆ ಬಿಡುಗಡೆ, ಏನ್ ಮಾಡ್ಬೇಕು, ಏನ್ ಮಾಡಬಾರದು ಡೀಟೇಲ್ಸ್ ! Read More »

ವಾಟ್ಸಪ್ ನಲ್ಲಿ ಕೇವಲ ಒಂದು ಕ್ಲಿಕ್ ಮಾಡಿದ್ರಿಂದ ಹೋಯ್ತು 21 ಲಕ್ಷ ರೂ!

ದಿನೇ ದಿನೇ ವಂಚಕರ ಸಂಖ್ಯೆ ಏರುತ್ತಲೇ ಇದೆ. ಟೆಕ್ನಾಲಜಿ ಹೆಚ್ಚುತ್ತಾ ಹೋದಂತೆ ಕಿರಾತಕರ ಕೈ ಚಳಕವು ಹೆಚ್ಚುತ್ತಲೇ ಇದೆ. ಸೈಬರ್ ಕ್ರೈಂ ನಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಇದೇ ಸಾಲಿಗೆ ಇನ್ನೊಂದು ಪ್ರಕರಣ ಸೇರಿಕೊಂಡಿದೆ. ಹೌದು. ವಾಟ್ಸಪ್ ನಲ್ಲಿ ಬಂದ ಒಂದು ಲಿಂಕ್ ಕ್ಲಿಕ್ ಮಾಡಿ 21 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ ಪಟ್ಟಣದ ರೆಡ್ಡಿಪ್ಪನಾಯ್ಡು ಕಾಲೋನಿಯ ನಿವಾಸಿ ವರಲಕ್ಷ್ಮಿ, ತನಗೆ ನಡೆದ ಸೈಬರ್ ವಂಚನೆಯ ಬಗ್ಗೆ ಮಾಹಿತಿ …

ವಾಟ್ಸಪ್ ನಲ್ಲಿ ಕೇವಲ ಒಂದು ಕ್ಲಿಕ್ ಮಾಡಿದ್ರಿಂದ ಹೋಯ್ತು 21 ಲಕ್ಷ ರೂ! Read More »

ಮಂಗಳೂರು : ಕೊಲೆ ಯತ್ನ ಪ್ರಕರಣದ ಆರೋಪಿ ಮಿಸ್ತಾ ಮೇಲೆ ಫೈರಿಂಗ್ !

ಮಂಗಳೂರು: ಮತ್ತೆ ಕರಾವಳಿಯಲ್ಲಿ ಗುಂಡಿನ ಸದ್ದು ಮೊಳಗಿದೆ. ಪೊಲೀಸರು ಫೈರ್ ಓಪನ್ ಮಾಡಿದ್ದಾರೆ. ಕಳೆದ ಕೆಲ ವಾರಗಳಿಂದ ಹಲವು ಕ್ರೈಮ್ ಚಟುವಟಿಕೆಗಳಿಂದ ದೇಶಾದ್ಯಂತ ಗಮನ ಸೆಳೆದಿದ್ದ ಮಂಗಳೂರಿನಲ್ಲಿ ಇಂದು ಸಂಜೆ ಮತ್ತೆ ಗುಂಡಿನ ಸದ್ದು ಮೊಳಗಿ ಜನ ಆತಂಕ ಅನುಭವಿಸಿದ್ದಾರೆ. ಇಲ್ಲಿ1 ಹಲವು‌ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ‌ಯೊಬ್ಬನನ್ನು ಸ್ಥಳ ಮಹಜರಿಗೆ ಕರೆತಂದಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು ಈ ವೇಳೆ‌‌ ಪೊಲೀಸರು‌ ಫೈರಿಂಗ್ ‌ಮಾಡಿದ ಘಟನೆ ಮಂಗಳೂರಿನಲ್ಲಿ‌‌ ನಡೆದಿದೆ‌. ಆರೋಪಿ ಮಿಸ್ತಾ ಎಂಬಾತನ …

ಮಂಗಳೂರು : ಕೊಲೆ ಯತ್ನ ಪ್ರಕರಣದ ಆರೋಪಿ ಮಿಸ್ತಾ ಮೇಲೆ ಫೈರಿಂಗ್ ! Read More »

ಸೆ.2 ರಂದು ಮಂಗಳೂರಿಗೆ ನರೇಂದ್ರ ಮೋದಿ

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆಯನ್ನು ಉದ್ಘಾಟಿಸುವರು. ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವ ಹಿನ್ನೆಲೆಯಲ್ಲಿ ಪ್ರಚಾರಾರ್ಥ ಹಾಗೂ ಸಂಘಟನಾತ್ಮಕವಾಗಿ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿಜೆಪಿಯ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top