ಉಡುಪಿ:ಉಡುಪಿ : ಮನೆ ಜಗಳಕ್ಕೆ ದಂಪತಿಗಳ ಮರಣ ! ಪತ್ನಿಯ ಕೊಲೆ-ಪತಿ ಆತ್ಮಹತ್ಯೆ

ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆಗೈದ ಪತಿ, ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ದೇವಲ್ಕುಂದ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ, ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ, ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರನ್ನು ವಿವಾಹವಾಗಿದ್ದರು. ರವಿ, ಬಗ್ವಾಡಿಯಲ್ಲಿ ಟಿಪ್ಪ‌ ಚಾಲಕನಾಗಿ ದುಡಿಯುತ್ತಿದ್ದು, ಕುಡಿತದ ಚಟವಿರುವ ರವಿ, ಪತ್ನಿಗೂ ಕಿರುಕುಳ ನೀಡುತ್ತಿದ್ದನು.

 

ಹೀಗಾಗಿ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.

Leave A Reply

Your email address will not be published.