ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ!! ಆರೋಪಿಗಳ ಬಂಧನದಲ್ಲಿ ಭಾಗವಹಿಸಿದ್ದ ಪೊಲೀಸರಿಗೆ ಅಭಿನಂದನಾ ಕಾರ್ಯಕ್ರಮ!!

Share the Article

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಅಭಿನಂದನಾ ಕಾರ್ಯಕ್ರಮವು ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಇಂದು ನಡೆಯಿತು.

ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ಹತ್ಯೆ ಪ್ರಕರಣದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಿಬ್ಬಂದಿಗಳನ್ನು ಪ್ರಶಂಶನಾ ಪತ್ರ ಸಹಿತ ನಗದು ಬಹುಮಾನ ನೀಡಿ ಗೌರವಿಸಿ, ಸನ್ಮಾನಿಸಿದರು.

ಕಳೆದ ಕೆಲ ದಿನಗಳ ಹಿಂದೆ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿ, ಹಲವು ಪ್ರತಿಭಟನೆ, ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷರ ಕಾರನ್ನು ಪಂಚರ್ ಮಾಡಿದ ಪ್ರಸಂಗವೂ ನಡೆಯಿತು.

ಮೃತರ ಮನೆಗೆ ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ರಾಜಕಾರಣಿಗಳು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಪರಿಹಾರದ ಮೊತ್ತ ವಿತರಿಸಿದ್ದರು.ಘಟನೆ ನಡೆದು 15 ದಿನಗಳಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿತ್ತು,ಅಲ್ಲದೇ ಪ್ರಕರಣದ ತನಿಖೆಯನ್ನು ಎನ್.ಐ.ಎ ಗೆ ವಹಿಸಲಾಗಿತ್ತು.ಸದ್ಯ ತನಿಖೆ ನಡೆಯುತ್ತಿದೆ.

Leave A Reply