ಯುಪಿಐ ಆಧಾರಿತ ಪಾವತಿಗಳ ಮೇಲೆ ಶುಲ್ಕ | ಕೇಂದ್ರ ಸರಕಾರ ಹೇಳಿದ್ದೇನು?
ನವದೆಹಲಿ : ಯುಪಿಐ ಆಧಾರಿತ ಪಾವತಿಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಈ ಮೂಲಕ ಎದ್ದಿದ್ದ ಗೊಂದಲವನ್ನು ಶಮನ ಮಾಡಿದೆ.
‘ಡಿಜಿಟಲ್ ಸೇವಾದಾತರಿಗೆ ಖರ್ಚು ಇದೆ. ಆದರೆ ಈ ಖರ್ಚು ಭರಿಸಲು ಪರ್ಯಾಯ ಮಾರ್ಗಗಳನ್ನು ಹುಡುಕಬೇಕಿದೆ. ಒಟ್ಟಾರೆಯಾಗಿ ಡಿಜಿಟಲ್ ವಹಿವಾಟು ಹೆಚ್ಚಾಗುವುದು ಸಮಾಜ ಹಾಗೂ ಉತ್ಪಾದಕತೆಗೆ ಹಲವು ರೀತಿಯಲ್ಲಿ ಅನುಕೂಲವಾಗಿದೆ. ಡಿಜಿಟಲ್ ಪಾವತಿಗಳಿಗೆ ಪೂರಕ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರವು ನೆರವು ನೀಡುತ್ತಾ ಬಂದಿದೆ. ಆ ನೆರವು ಈ ವರ್ಷವೂ ಮುಂದುವರಿಯಲಿದೆ’ ಎಂದು ಹಣಕಾಸು ಸಚಿವಾಲಯ ಹೇಳಿದೆ.
ಡಿಜಿಟಲ್ ವಹಿವಾಟಿಗೆ ಶುಲ್ಕ ವಿಧಿಸುವ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಕರಡು ಪ್ರಸ್ತಾಪವನ್ನು ಜನರ ಮುಂದಿಟ್ಟು ಪ್ರತಿಕ್ರಿಯೆಯನ್ನು ಆಹ್ವಾನಿಸಿತ್ತು. ಪ್ರತಿ ವಹಿವಾಟಿಗೂ ಡಿಜಿಟಲ್ ಸೇವಾದಾತರಿಗೆ ಒಂದಿಷ್ಟು ಖರ್ಚು ಬರುತ್ತದೆ. ಅದನ್ನು ಬಳಕೆದಾರರೇ ತುಂಬಬೇಕು ಪ್ರಸ್ತಾಪದಲ್ಲಿ ಹೇಳಲಾಗಿತ್ತು. ಈ ಪ್ರಸ್ತಾವಕ್ಕೆ ಜನರಿಂದ ವಿರೋಧ ವ್ಯಕ್ತವಾಗಿದೆ.
ಕೊನೆಗೆ ಎಚ್ಚೆತ್ತ ಹಣಕಾಸು ಸಚಿವಾಲಯ ಶುಲ್ಕ ವಿಧಿಸುವ ಯಾವ ಉದ್ದೇಶವೂ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದೆ