ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಲೋಕಾಯುಕ್ತವನ್ನು ಮಲಗಿಸಿ, ಅದರ ಬದಲು ಷ್ಟಾಚಾರ ನಿಗ್ರಹ ದಳ (ಎಸಿಬಿ) ತಂದಿದ್ದ ಸಿದ್ದರಾಮಯ್ಯನವರಿಗೆ ಮೊನ್ನೆ ಹಾಯ್ ಕೋರ್ಟು ತೀರ್ಪು ಕೊಟ್ಟಂದಿನಲ್ಲಿಂದ ತೀವ್ರ ಹಿನ್ನಡೆ ಆಗಿತ್ತು. ಈಗ ಅದರ ವಿರುದ್ಧ ಸಿದ್ದು ಗ್ಯಾಂಗ್ ಮೇಲ್ಮನವಿ ಸಲ್ಲಿಸಿದೆ.

ಕನಕರಾಜು ಎನ್ನುವ ವ್ಯಕ್ತಿಯೊಬ್ಬರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಮುಂದೆ ಖಾಸಗಿ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.

ಇದಕ್ಕು ಮುನ್ನ ರಾಜ್ಯ ಸರ್ಕಾರವೇ ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ ಎಂದು ವರದಿಯಾಗಿತ್ತು. ಆದರೆ ಈ ವರದಿಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಖಾಸಗಿ ಮೇಲ್ಮನವಿ ಅರ್ಜಿ ದಾಖಲಾಗಿದೆ. ಈ ವಿಚಾರದಲ್ಲಿ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಎಸಿಬಿ ರದ್ದು ಮಾಡುವ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ’ ಎಂದು ಹೇಳಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ರದ್ದುಗೊಳಿಸಿದ್ದು, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ಕೋರ್ಟು ನೀಡಿದೆ. ದೇಶಕ್ಕೆ ಮಾದರಿ ಆಗಿದ್ದ ಲೋಕಾಯುಕ್ತವನ್ನು ಸಾಯಿಸಿದ ಸಿದ್ದರಾಮಯ್ಯನವರಿಗೆ ಈಗ ತೀವ್ರ ಹಿನ್ನಡೆ ಆಗಿದೆ. ಸುಪ್ರೀಂ ಕೂಡಾ ಹೈ ಕೋರ್ಟು ಆದೇಶವನ್ನೇ ಎತ್ತಿ ಹಿಡಿಯಲಿದೆ ಎನ್ನಲಾಗುತ್ತಿದೆ.

Leave A Reply

Your email address will not be published.