DA/DR – ಭರ್ಜರಿ ಸಿಹಿ ಸುದ್ದಿ : ಕೇಂದ್ರ ಸರ್ಕಾರದ ಉದ್ಯೋಗಿಗಳೇ, ಶೀಘ್ರದಲ್ಲಿ ಸಿಗಲಿದೆ 8 ತಿಂಗಳ DA / DR ಬಾಕಿ

ಕೇಂದ್ರ ಸರ್ಕಾರಿ ನೌಕರರು ಡಿಎ DA / DR 18 ತಿಂಗಳ ಬಾಕಿಯನ್ನು ಪಡೆಯುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಇದರಲ್ಲಿ ಜನವರಿ 1, 2020, ಜುಲೈ 1, 2020 ಮತ್ತು ಜನವರಿ 1, 2021 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ / ತುಟ್ಟಿಭತ್ಯೆ ಪರಿಹಾರದ ‘ಬಾಕಿ’ ಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ರಾಷ್ಟ್ರೀಯ ಸಿಬ್ಬಂದಿ ಮಂಡಳಿಯ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಅವರು ಆಗಸ್ಟ್ 18 ರಂದು ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಮಂಡಳಿಯ (ಜೆಸಿಎಂ) ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಸರ್ಕಾರದೊಂದಿಗೆ ವಿಸ್ತೃತ ಚರ್ಚೆ ನಡೆಯಿತು. ನ್ಯಾಷನಲ್ ಕೌನ್ಸಿಲ್ ಆಫ್ ಸ್ಟಾಫ್ ಸೈಡ್ ನ ಕಾರ್ಯದರ್ಶಿಗಳು ಮತ್ತು ಸದಸ್ಯರು ಬಾಕಿಯನ್ನು ಯಾವ ರೀತಿಯಲ್ಲಿ ವಿತರಿಸಲಾಗುತ್ತದೆ ಎಂಬುದರ ಬಗ್ಗೆ ಚರ್ಚಿಸಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಶಿವ ಗೋಪಾಲ್ ಮಿಶ್ರಾ ಅವರು ಸಂಪುಟ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ಫೆಬ್ರವರಿ 08, 2021 ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ನೌಕರರ ವೇತನ ಅಥವಾ ಪಿಂಚಣಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿತ್ತು. ಆದರೂ, ಪರಿಸ್ಥಿತಿ ಸುಧಾರಿಸಿದರೆ ಅದನ್ನು ನೌಕರರಿಗೆ ಹಿಂತಿರುಗಿಸಬೇಕಾಗುತ್ತದೆ. ಇದು ಕಾರ್ಮಿಕರ ಹಕ್ಕು. ಅವರಿಗೆ ಕಾನೂನಿನ ಪ್ರಕಾರ ಪಾವತಿಸಬೇಕು ಎನ್ನಲಾಗಿದೆ. ಕೊರೊನಾ ಅವಧಿಯಲ್ಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ತುಟ್ಟಿಭತ್ಯೆ ಮತ್ತು ತುಟ್ಟಿಭತ್ಯೆ ಪರಿಹಾರದ ಕೊರತೆಯಿಂದಾಗಿ ಅನೇಕ ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಯಿತು. ಈ ಸಮಯದಲ್ಲಿ ಅನೇಕ ಸರ್ಕಾರಿ ನೌಕರರು ಸಹ ನಿವೃತ್ತಿ ಕೂಡಾ ತಗೊಂಡಿದ್ದರು.

Leave A Reply

Your email address will not be published.