ಕೆಪಿಟಿಸಿಎಲ್ ಪ್ರಶ್ನೆ ಪತ್ರಿಕೆ ಅಕ್ರಮ 9 ಮಂದಿ ಅಂದರ್

Share the Article

ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ನಗರ ಪೊಲೀಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಗದಗದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದರು. ಆಗಸ್ಟ್ 7ರಂದು ನಡೆದಿದ್ದ ಪರೀಕ್ಷೆಯಲ್ಲಿ ಗೋಕಾಕ್ ನಲ್ಲಿ ಸ್ಮಾರ್ಟ್ ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರೂ ಎಂದು ಬೆಳಗಾವಿ ಎಸ್ ಪಿ ಡಾ. ಸಂಜೀವ್ ಪಾಟೀಲ್ ಹೇಳಿದ್ದಾರೆ.

ಪ್ರಕರಣ ಸಂಬಂಧ ಪರೀಕ್ಷಾರ್ಥಿ ಸಿದ್ದಪ್ಪ ಮದೀಹಳ್ಳಿ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಸಿದ್ದಪ್ಪ ನೀಡಿದ ಮಾಹಿತಿ ಆಧರಿಸಿ ಉಳಿದ ಆರೋಪಿಗಳನ್ನು ಬಂಧಿಸಲಾಗಿದೆ.
ಇನ್ನು ನಿನ್ನೆ ಗದಗದ ಮುನ್ಸಿಪಲ್ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ, ಅವರ ಪುತ್ರ ಸಮೀತ್ ಕುಮಾರ್ ನನ್ನು ಬಂಧಿಸಿದ್ದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಸೋರಿಕೆ ಆಗಿತ್ತು. ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು.
ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದ ಸಮೀತ್ ಕುಮಾರ್ ಮೊಬೈಲ್ ಮೂಲಕ ಪ್ರಶ್ನೆಡ್ ಪತ್ರಿಕೆ ಸೆರೆ ಹಿಡಿದು ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂದು ಶಂಕಿಸಲಾಗಿದೆ.

2022ರ ಆಗಸ್ಟ್ 7ರ ಭಾನುವಾರ ಗದಗ-ಬೆಟಗೇರಿ ಅವಳಿ ನಗರದಲ್ಲಿ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆ ಪೈಕಿ ಮುನ್ಸಿಪಲ್ ಕಾಲೇಜ್ ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು.

Leave A Reply