ಆಗಸ್ಟ್ 24 ರಿಂದ 27ರವರೆಗೆ ಈ ಜಿಲ್ಲೆಯಾದ್ಯಂತ ನಿಷೇಧಾಜ್ಞೆ | ಮದ್ಯ ಮಾರಾಟ ಕೂಡಾ ಬಂದ್ : ಜಿಲ್ಲಾಡಳಿತ ಆದೇಶ
ಆಗಸ್ಟ್ 26ರಂದು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ ನಿಷೇಧಾಜ್ಞೆ ಜಾರಿ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ್ ಆಗಸ್ಟ್ 24ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27ರ ಸಂಜೆ ಆರು ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಘೋಷಣೆ ಕೂಗುವಂತಿಲ್ಲ. ಹೆಚ್ಚು ಜನರು ಸೇರುವಂತಿಲ್ಲ, ವಿಜಯೋತ್ಸವ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಬಿಜೆಪಿ ಜನ ಜಾಗೃತಿ ಸಮಾವೇಶ ಹಾಗೂ ಕಾಂಗ್ರೆಸ್ ಮಡಿಕೇರಿ ಚಲೋ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇನ್ನು ಆಗಸ್ಟ್ 24ರ ಬೆಳಗ್ಗೆ 6 ಗಂಟೆಯಿಂದ 27ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.