ಆಗಸ್ಟ್ 24 ರಿಂದ 27ರವರೆಗೆ ಈ ಜಿಲ್ಲೆಯಾದ್ಯಂತ ನಿಷೇಧಾಜ್ಞೆ | ಮದ್ಯ ಮಾರಾಟ ಕೂಡಾ ಬಂದ್ : ಜಿಲ್ಲಾಡಳಿತ ಆದೇಶ

ಆಗಸ್ಟ್​ 26ರಂದು ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕ್ರಮಗಳ  ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ ನಿಷೇಧಾಜ್ಞೆ ಜಾರಿ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಆದೇಶ ಹೊರಡಿಸಿರುವ ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ್​ ಆಗಸ್ಟ್​ 24ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್​ 27ರ ಸಂಜೆ ಆರು ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಘೋಷಣೆ ಕೂಗುವಂತಿಲ್ಲ. ಹೆಚ್ಚು ಜನರು ಸೇರುವಂತಿಲ್ಲ, ವಿಜಯೋತ್ಸವ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬಿಜೆಪಿ ಜನ ಜಾಗೃತಿ ಸಮಾವೇಶ ಹಾಗೂ ಕಾಂಗ್ರೆಸ್​ ಮಡಿಕೇರಿ ಚಲೋ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇನ್ನು ಆಗಸ್ಟ್​ 24ರ ಬೆಳಗ್ಗೆ 6 ಗಂಟೆಯಿಂದ 27ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.

Leave A Reply

Your email address will not be published.