ಪದವಿ ವಿದ್ಯಾರ್ಥಿಗಳೇ ನಿಮಗಿದೆ ಇಲ್ಲೊಂದು ಗುಡ್ ನ್ಯೂಸ್

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2022-23ನೇ ಸಾಲಿಗೆ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ(ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1 ಲಕ್ಷ ರೂ. ಇರುತ್ತದೆ. ಅರ್ಜಿಯನ್ನು ವೆಬ್ ಸೈಟ್ www.bcwd.karnataka.gov.in ಸಲ್ಲಿಸಬೇಕು. ಸೆ.12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮುಖಾಂತರ ಅಥವಾ ಸಂಬಂಧಿಸಿದ ತಾಲ್ಲೂಕು ಕಲ್ಯಾಣಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080 8050370006 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Leave A Reply

Your email address will not be published.