BPL ಕಾರ್ಡ್ ಹೊಂದಿದವರಿಗೆ ‘ಅಮೃತ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ : MESCOM ಪ್ರಕಟಣೆ

ಮಂಗಳೂರು : ಸರಕಾರದ ಅಮೃತ ಜ್ಯೋತಿ ಯೋಜನೆಯಲ್ಲಿ ಘೋಷಿಸಿದಂತೆ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್‌ ಬಳಕೆದಾರರಿಗೆ (ಪರಿಶಿಷ್ಟ ಜಾತಿ ಮತ್ತು ಪಂಗಡದ ಭಾಗ್ಯಜ್ಯೋತಿ ಕುಟೀರ ಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ )2022ರ ಮೇ21ರಿಂದ ಅನ್ವಯವಾಗುವಂತೆ ಮಾಸಿಕ 75 ಯೂನಿಟ್‌ ಉಚಿತ ವಿದ್ಯುತ್‌ ನೀಡಲಾಗುವುದು.

ಈ ಯೋಜನೆಯ ಲಾಭವನ್ನು ಪಡೆಯಲು ಅರ್ಹ ಗ್ರಾಹಕರು ಸುವಿಧ ಪೋರ್ಟಲ್‌ನಲ್ಲಿ ನೋಂದಣಿ ಮಾಡಬೇಕಾಗಿದ್ದು, ಗ್ರಾಹಕರು ಸ್ವಯಂ ಸುವಿಧ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಅಥವಾ ಆಧಾರ್ ಕಾರ್ಡ್ ಮತ್ತು ಆಧಾರ್ ಕಾಡ್‌ರ್ನಲ್ಲಿ ನೋಂದಣಿಯಾಗಿರುವ ಮೊಬೈಲ್‌ನೊಂದಿಗೆ ಸಮೀಪದ ಮೆಸ್ಕಾಂ ಉಪವಿಭಾಗ/ಕಾರ್ಯ ಮತ್ತು ಪಾಲನಾ ಶಾಖೆಯನ್ನು ಭೇಟಿ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದ್ದು ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗಪಡೆಯುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಅರ್ಹ ಗ್ರಾಹಕರು ಸುವಿಧಾ ಪೋರ್ಟ್‌ಲ್‌ನಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದಾಗಿದೆ ಅಥವಾ ಆಧಾರ್‌ ಕಾರ್ಡ್‌ನಲ್ಲಿ ನೋಂದಣಿಯಾಗಿರುವ ಮೊಬೈಲ್‌ನೊಂದಿಗೆ ಸಮೀಪದ ಮೆಸ್ಕಾಂ ಉಪವಿಭಾಗದ ಕಾರ್ಯ ಮತ್ತು ಪಾಲನಾ ಶಾಖೆಯನ್ನು ಭೇಟಿ ಮಾಡಿ ನೋಂದಣಿ ಮಾಡಿಸಬಹುದು ಎಂದು ಮೆಸ್ಕಾಂನ ಪ್ರಕಟನೆ ತಿಳಿಸಿದೆ.

Leave A Reply

Your email address will not be published.