ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ, ಹೈಕಮಾಂಡ್ ಅಂತಿಮ ತೀರ್ಮಾನ – ಕೆ. ಗೋಪಾಲಯ್ಯ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್ ಅವರನ್ನು ಸ್ಥಾನದಿಂದ ಕೈ ಬಿಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಹೋರಾಟ ನಡೆಯುತ್ತಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನ ಮೂರು ವರ್ಷದ ನಂತರ ಬೇರೆ ಅವರಿಗೆ ಬಿಟ್ಟುಕೊಡೋದು ಸಹಜ. ಇದರ ಬಗ್ಗೆ ತೀರ್ಮಾನ ಕೈಗೊಳ್ಳಲು ಕೇಂದ್ರದ ವರಿಷ್ಠರಿದ್ದಾರೆ. ನಾವು ಜಿಲ್ಲೆಯಲ್ಲಿ ಕುಳಿತುಕೊಂಡು ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಆದರೆ ಕೇಂದ್ರದಿಂದ ತಗೆದುಕೊಂಡ ತೀರ್ಮಾನಕ್ಕೆ ನಾವೆಲ್ಲರೂ ಬದ್ಧವಾಗಿರುತ್ತೇವೆ ಎಂದು ತುಮಕೂರಿನಲ್ಲಿ ಹೇಳಿದ್ದಾರೆ.

Leave A Reply

Your email address will not be published.