ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್ | KSRTC ಯಿಂದ ಹೆಚ್ಚುವರಿ 500 ಬಸ್ ಸಂಚಾರ ವ್ಯವಸ್ಥೆ
ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿವಿಧ ಊರುಗಳಿಗೆ ತೆರಳುವಂತಹಾ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ 500 ಹೆಚ್ಚುವರಿ ಬಸ್ ಗಳ ವಿಶೇಷ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ ಕೆ ಎಸ್ ಆರ್ ಟಿ ಸಿ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ ಕೆಎಸ್ಆರ್ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು. ಅದರಂತೆ, ದಿನಾಂಕ 30-08-2022 ಮತ್ತು 31-08-2022 ರಂದು ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 29-08-2022 ಮತ್ತು 30-08-2022 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಆರೆಂಜ್ ಮಾಡಿದ್ದಾರೆ.
ಯಾವ ಬಸ್ ನಿಲ್ದಾಣದಿಂದ ಎಲ್ಲೆಲ್ಲಿಗೆ ಕೆ ಎಸ್ ಆರ್ ಟಿ ಸಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ ಎಂಬ ಬಗೆಗಿನ ಮಾಹಿತಿ ಇಲ್ಲಿದೆ ಓದಿ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣೆಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾರ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಕಾರ್ಯಾಚರಣೆ ಇರಲಿದೆ.
ಅಲ್ಲದೆ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ವಿಶೇಷ ಬಸ್ ಸಂಚಾರ ವ್ಯವಸ್ಥೆ
ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಪ್ರತಿಷ್ಠಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಉಳಿದಂತೆ, ಬೆಂಗಳೂರಿನ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ರಾಜಾಜಿನಗರದ ನವರಂಗ್, ಮಲ್ಲೇಶ್ವರಂ 18ನೇ ಕ್ರಾಸ್, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಹೀಗೆ ಹಬ್ಬದ ಸಂದರ್ಭ ಹೊರಡುವ ವಿಶೇಷ ವಸ್ತುಗಳ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಬುಕ್ಕಿಂಗ್ ಕೌಂಟರ್ ನಲ್ಲೂ ಟಿಕೆಟ್ ಖರೀದಿಸೋದಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕಲ್ಪಿಸಿರುವಂತಹ ಹೆಚ್ಚುವರಿ ಸಾರಿಗೆ ಬಸ್ ಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸೋದಕ್ಕಾಗಿ www.ksrtc.karnataka.gov.in ಗೆ ಭೇಟಿ ನೀಡಿ ಆಯಾ ಬುಕಿಂಗ್ ಮಾಡಬಹುದಾಗಿದೆ.
ಪ್ರಯಾಣಿಕರ ಬುಕ್ಕಿಂಗ್ ಗೆ ಅನುಕೂಲವಾಗುವ ನಿಟ್ಟಿನಲ್ಲಿ 691 ಗಣಕೀಕೃತ ಬುಕ್ಕಿಂಗ್ ಕೌಂಟರ್ ಗಳಿದ್ದು, ಅಲ್ಲಿಯೂ ಗೌರಿಗಣೇಶ ಹಬ್ಬಕ್ಕೆ ತೆರಳೋರು ಮುಂಗಡ ಆಸನಗಳ ಕಾಯ್ದಿರಿಸುವಿಕೆಯನ್ನು ಮಾಡಬಹುದು.
ಮುಂಗಡ ಟಿಕೆಟ್ ಖರೀದಿಸಿದ್ರೇ ಶೇ.5ರಿಂದ 10ರಷ್ಟು ರಿಯಾಯಿತಿ ಬೇರೆ ದೊರೆಯಲಿದೆ. ಗಣೇಶ ಚತುರ್ಥಿಗೆ ತೆರಳೋದಕ್ಕಾಗಿ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದರೆ ಶೇ.5 ರಷ್ಟು ರಿಯಾಯಿತಿ ಕೂಡ ನೀಡಲಾಗುತ್ತಿದೆ. ಇದಷ್ಟೇ ಅಲ್ಲದೇ ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್ ಗಳನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ, ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ಕೂಡ ನೀಡಲಾಗುತ್ತದೆ.