ಮೀನುಗಾರರಿಗೆ ‘ಕಿಸಾನ್ ಕ್ರೆಡಿಟ್ ಕಾರ್ಡ್’ ನ್ನು ತ್ವರಿತವಾಗಿ ವಿತರಿಸಿ : ಸಿ ಎಂ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ

ಸಿಎಂ ಬಸವರಾಜ ಬೊಮ್ಮಾಯಿ ಅವರು ಮೀನುಗಾರರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಆದ್ಯತೆ ಮೇಲೆ ಒದಗಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

“ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿರುವ ಮೀನುಗಾರರಿಗೆ ಮೊದಲ ಹಂತದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ತ್ವರಿತವಾಗಿ ವಿತರಿಸಬೇಕು” ಎಂದು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಭೆ ನಡೆಸಿ ಈ ಮಾತನ್ನು ಹೇಳಿದ್ದಾರೆ.

”ಮೀನುಗಾರಿಕೆ, ಪಶುಸಂಗೋಪನೆಯನ್ನು ಕೃಷಿಗೆ ಪೂರಕ ಚಟುವಟಿಕೆಗಳೆಂದು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಈ ವಲಯದವರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ವಿಸ್ತರಿಸಿದ್ದಾರೆ. ಮೀನುಗಾರಿಕಾ ಇಲಾಖೆ ತಮ್ಮ ಬಳಿ ಇರುವ ಮೀನುಗಾರರ ಮಾಹಿತಿಯನ್ನು ಬ್ಯಾಂಕರುಗಳಿಗೆ ಒದಗಿಸಿ, ಅಭಿಯಾನದ ಮಾದರಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು,”
ಎಂದು ನಿರ್ದೇಶನ ನೀಡಿದರು.

ಆಳಸಮುದ್ರ ಮೀನುಗಾರಿಕೆ ಬೋಟ್‌ಗಳ ಖರೀದಿಗೆ ನೆರವು ನೀಡುವ ಯೋಜನೆಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಈಗಾಗಲೇ ನೂರಾರು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ, ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಮೀನುಗಾರಿಕಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಮ್, ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿ ಸಂಚಾಲಕ ಮುರಳಿಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Leave A Reply

Your email address will not be published.