ಮಹಿಳೆಯರೇ ನಿಮಗಿದೋ ಭರ್ಜರಿ ಉದ್ಯೋಗವಕಾಶ | ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

ಕೊಪ್ಪಳ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ ಮತ್ತು 60 ಸಹಾಯಕಿಯರ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ಹುದ್ದೆಗಳು ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 25,2022 ರಿಂದ ಸೆಪ್ಟೆಂಬರ್ 23,2022ರ ಸಂಜೆ 5:30ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಯೋಮಿತಿ : ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://anganwadirecruit.kar.nic.in/ ಅಧಿಸೂಚನೆಯನ್ನು ಓದಿ, ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ, ಆಗಸ್ಟ್ 25,2022 ರಿಂದ ಸೆಪ್ಟೆಂಬರ್ 23,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು
ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.