ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಇನ್ನು ಮುಂದೆ, ರಾಜ್ಯ ಆರೋಗ್ಯ ಯೋಜನೆಗಳೊಂದಿಗೆ ಸಹ-ಬ್ರಾಂಡ್ ಮಾಡಲು ಕೇಂದ್ರ ಸರಕಾರ ನಿರ್ಧಾರ ಮಾಡಿದೆ. ಹಾಗಾಗಿ, ಈ ಹಿನ್ನೆಲೆಯಲ್ಲಿ ಕೇಂದ್ರ ಮಹತ್ವದ ನಿರ್ಧಾರ ಕೈಗೊಂಡಿದೆ. ಈಗ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ಕೇಂದ್ರ ಮತ್ತು ರಾಜ್ಯ ಆರೋಗ್ಯ ಯೋಜನೆಗಳಿಗೆ ಬಳಸಬಹುದು. ಕೇಂದ್ರದ ಲಾಂಛನವನ್ನು ಹೊಂದಿದ್ದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳು ಇನ್ನು ಮುಂದೆ ರಾಜ್ಯಗಳ ಲಾಂಛನವನ್ನು ಒಳಗೊಂಡಿರುತ್ತವೆ. ಇದೊಂದು ಮಹತ್ವದ ನಿರ್ಧಾರ ಎಂದೇ ಹೇಳಬಹುದು.

 

ಈ ಪ್ರಕ್ರಿಯೆಗೆ ದೇಶದ 31 ರಾಜ್ಯಗಳು ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಗೆ ಒಪ್ಪಿಗೆ ಸೂಚಿಸಿವೆ. ಆದ್ರೆ, ದೆಹಲಿ, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಈ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಿಂದ ದೂರ ಉಳಿಯಲು ನಿರ್ಧರಿಸಿವೆ. ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳೊಂದಿಗೆ ಚರ್ಚೆ ನಡೆಯುತ್ತಿದೆ.

ಏನಿದು ಆಯುಷ್ಮಾನ್ ಭಾರತ್.?
ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯೇ ಆಯುಷ್ಮಾನ್ ಭಾರತ್. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಯೋಜನೆಯನ್ನ ನರೇಂದ್ರ ಮೋದಿ ಅವ್ರು ಸೆಪ್ಟೆಂಬರ್ 2018ರಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಸಾರ್ವತ್ರಿಕ ಆರೋಗ್ಯ ಸೇವೆಯನ್ನ ಒದಗಿಸುವ ಉದ್ದೇಶದಿಂದ ಪ್ರಾರಂಭಿಸಿದರು. ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಸರ್ಕಾರವು ರೂ. 5 ಲಕ್ಷ ನಗದು ರಹಿತ ಆರೋಗ್ಯ ಸೇವೆಯನ್ನು ಒದಗಿಸುತ್ತದೆ.

ಆಯುಷ್ಮಾನ್ ಭಾರತ್ ಯೋಜನೆ (PM-JAY) ಅಡಿಯಲ್ಲಿ ಕೋವಿಡ್-19ನಿಂದಾಗಿ ತಮ್ಮ ಹೆತ್ತವರನ್ನು ಕಳೆದುಕೊಂಡಿರುವ ಎಲ್ಲಾ ಮಕ್ಕಳಿಗೆ ಉಚಿತ ಆರೋಗ್ಯ ವಿಮೆಯನ್ನುನೀಡಲು ಭಾರತ ಸರ್ಕಾರ ನಿರ್ಧರಿಸಿದೆ. ಆಯುಷ್ಮಾನ್ ಭಾರತ್ ಯೋಜನೆ (PM-JAY) ಅಡಿಯಲ್ಲಿ ಎಲ್ಲಾ ಮಕ್ಕಳು 5 ಲಕ್ಷ ರೂಪಾಯಿ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಫಲಾನುಭವಿಗಳಾಗಿ ದಾಖಲಾಗುತ್ತಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ, ರೋಗಿಗಳು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು.

Leave A Reply

Your email address will not be published.