ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಿಕ್ತು ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್

ಚಾಮರಾಜಪೇಟೆ: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗ್ರೀನ್‌ಸಿಗ್ನಲ್ ನೀಡಿದೆ. ಈ ಮೂಲಕ ಭರ್ಜರಿ ಗಣೇಶೋತ್ಸವ ಆಚರಣೆಗೆ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ.

 

ಸಾಂಸ್ಕೃತಿಕ ಆಚರಣೆಗೆ ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು ಎಂದು ಹೇಳಿದೆ. ಆಗಸ್ಟ್‌ 31ರಿಂದ ನಿರ್ದಿಷ್ಟ ಅವಧಿಗೆ ಹೈಕೋರ್ಟ್‌ ಅನುಮತಿ ನೀಡಿದೆ.

ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪಿಸಲು ಆವಕಾಶವಿಲ್ಲ. ಬಕ್ರೀದ್ & ರಂಜಾನ್ ಪ್ರಾರ್ಥನೆಗೆ ಯಥಾಪ್ರಕಾರ ಅವಕಾಶ ನೀಡಲಾಗಿತ್ತು ಹಾಗೂ ಚಾಮರಾಜಪೇಟೆ ಈದ್ಗಾ ಜಾಗವನ್ನು ಆಟದ ಮೈದಾನವಾಗಿಯೂ ಬಳಕೆ ಮಾಡಲು, ಮೊದಲು ಇದ್ದಂತೆ ಯಥಾಸ್ಥಿತಿ ಕಾಯಲು ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಆದೇಶ ಹೊರಡಿಸಿದ್ದರು. ಆದರೆ ಇದೀಗ ಹೈಕೋರ್ಟ್ ಗಣೇಶ ಪ್ರತಿಷ್ಠಾಪಿಸಲು ಅವಕಾಶ ನೀಡಿದೆ.

ಗಣೇಶೋತ್ಸವವನ್ನು ಈದ್ಗಾ ಮೈದಾನದಲ್ಲಿ ಆಚರಿಸುವ ಸಂಬಂಧವೂ ವಿಚಾರಣೆ ನಡೆಸಿದ ನ್ಯಾಯಾಲಯ, ಆಚರಣೆಗೆ ಅನುಮತಿ ನೀಡುವುದು ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಸ್ಪಷ್ಟವಾಗಿ ಹೇಳಿದೆ. ಈ ಮೂಲಕ ಸರ್ಕಾರ ಅನುಮತಿ ನೀಡಿದರೆ ಗಣೇಶೋತ್ಸವ ನಡೆಸಬಹುದು ಎಂದು ಕೋರ್ಟ್‌ ಸೂಚಿಸಿದಂತಾಗಿದೆ. ನ್ಯಾಯಾಲಯದ ಆದೇಶ ಹೊರಬಿದ್ದದ್ದೇ ತಡ ಚಾಮರಾಜಪೇಟೆ ನಾಗರಿಕ ಒಕ್ಕೂಟ ಹಾಗೂ ಹಿಂದೂ ಪರ ಸಂಘಟನೆಗಳು ಸಂಭ್ರಮಾಚರಣೆ ಮಾಡಿದವು. ಗಣಪತಿ ಬಪ್ಪಾ ಮೋರೆಯಾ.. ಮಂಗಳ ಮೂರ್ತಿ ಮೋರೆಯಾ ಎಂದು ಎಂದು ಘೋಷಣೆ ಕೂಗಿ ಹೈಕೋರ್ಟ್‌ ತೀರ್ಪನ್ನು ಕಾರ್ಯಕರ್ತರು ಸ್ವಾಗತಿಸಿದರು.

ಗುರುವಾರವಷ್ಟೇ ಈ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠ, ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವದ ವೇಳೆ ರಾಷ್ಟ್ರ ಧ್ವಜಾರೋಹಣ, ಮುಸ್ಲಿಂ ಹಬ್ಬಗಳ ವೇಳೆ ಪ್ರಾರ್ಥನೆಗೆ ಅವಕಾಶವನ್ನಷ್ಟೇ ನೀಡಲು ಆದೇಶಿಸಿದ್ದ ನ್ಯಾಯಾಲಯ, ಇನ್ನುಳಿದಂತೆ ಮೈದಾನವನ್ನು ಮಕ್ಕಳ ಆಟಕ್ಕೆ ಮೀಸಲಿಡಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಚಾಮರಾಜಪೇಟೆ ನಾಗರಿಕ ಒಕ್ಕೂಟದ ಸದಸ್ಯರು ವಿಭಾಗೀಯ ಪೀಠದ ಮೆಟ್ಟಿಲೇರಿದ್ದರು. ಇದೀಗ ಯಶಸ್ಸು ದೊರೆತಿದೆ.

Leave A Reply

Your email address will not be published.