ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದ ಪ್ರಧಾನಿ ಮೋದಿ : ಸಮೀಕ್ಷೆ

ಅತ್ಯಂತ ಜನಪ್ರಿಯ ವಿಶ್ವ ನಾಯಕರ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅಗ್ರಸ್ಥಾನ ಅಲಂಕರಿಸಿರುವುದಾಗಿ ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆಯೊಂದು ಬಹಿರಂಗಗೊಂಡಿದೆ.

 

ನರೇಂದ್ರ ಮೋದಿ ಭಾರತ ಮಾತ್ರವಲ್ಲದೇ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ. ಈ ಕಾರಣಕ್ಕೆ ಹಲವಾರು ಸರ್ವೇಗಳಲ್ಲಿ ಮೊದಲ ಸ್ಥಾನದಲ್ಲಿ ಅವರ ಹೆಸರು ಕೇಳಿಬರುತ್ತಿತ್ತು. ಈಗ ಮಾರ್ನಿಂಗ್ ಕನ್ಸಲ್ಸ್ ಸಮೀಕ್ಷೆಯ ಪ್ರಕಾರ, ಪ್ರಧಾನಿ ಮೋದಿಗೆ ಮತ್ತೆ ಮೊದಲ ಸ್ಥಾನ ದೊರೆತಿದೆ.

22 ವಿಶ್ವ ನಾಯಕರನ್ನು ಒಳಗೊಂಡಿರುವ ಈ ಪಟ್ಟಿಯಲ್ಲಿ
ಪ್ರಧಾನಿ ಮೋದಿಯ ನಂತರ ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಮತ್ತು ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ ಕ್ರಮವಾಗಿ 63 ಮತ್ತು 54 ರಷ್ಟು ರೇಟಿಂಗ್‌ಗಳೊಂದಿಗೆ ಎರಡನೇ ಮತ್ತು ಮೂರನೇ ಸ್ಥಾನ ಸಿಕ್ಕಿದೆ. ಯುಎಸ್ ಅಧ್ಯಕ್ಷ ಜೋ ಬೈಡೆನ್ 41 ಪ್ರತಿಶತ ರೇಟಿಂಗ್‌ನೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಬೈಡೆನ್ ನಂತರ ಕೆನಡಾಧ್ಯಕ್ಷ ಜಸ್ಟಿನ್ ಟ್ರುಡೊ 39 ಪ್ರತಿಶತ ಮತ್ತು ಜಪಾನ್ ಪ್ರಧಾನಿ ಪ್ಯೂಮಿಯೊ ಕಿಶಿಡಾ 38 ಪ್ರತಿಶತ ರೇಟಿಂಗ್ ಪಡೆದುಕೊಂಡಿದ್ದಾರೆ.

Leave A Reply

Your email address will not be published.