ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ವಜಾ ಮಾಡುವಂತೆ ನರೇಂದ್ರ ಮೋದಿಗೆ ಪತ್ರ!

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ವಜಾ ಮಾಡಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘ (ರುಪ್ಸಾ)ದ ರಾಜ್ಯಾಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ಒತ್ತಾಯಿಸಿದ್ದಾರೆ.

 

ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಡಿಡಿಪಿಐ ಗಳು ನೇರವಾಗಿಯೇ ಲಂಚ ಕೇಳುತ್ತಿದ್ದಾರೆ. ಶಿಕ್ಷಣ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಪ್ರಧಾನಿಯವರುಗೆ ಪತ್ರ ಬರೆಯುತ್ತಿದ್ದೇವೆ. ಈಗಾಗಲೇ ಎರಡು ಬಾರಿ ಪತ್ರ ಬರೆಯಲಾಗಿದೆ. ಇದೀಗ ಮೂರನೇ ಬಾರಿಗೆ ಪತ್ರ ಬರೆಯುತ್ತಿದ್ದೇವೆ ಎಂದು ಹೇಳಿದರು. ವಜಾಗೊಳಿಸದಿದ್ದರೇ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಶೋಕಿ ಮಾಡೋರನ್ನ ಶಿಕ್ಷಣ ಸಚಿವರನ್ನಾಗಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ

ಶಿಕ್ಷಣ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಲಂಚವಿಲ್ಲದೆ ಯಾವುದೇ ಕೆಲಸಗಳು ಆಗುವುದಿಲ್ಲ ಎಂಬ ಪರಿಸ್ಥಿತಿಯಿದೆ. ಆರ್ ಆರ್ ನೀಡಲು ಕೂಡಾ ಲಂಚ ಪಡೆಯಲಾಗುತ್ತಿದೆ. 10 ವರ್ಷಗಳಿಗೊಮ್ಮೆ ಮಾನ್ಯತೆ ನವೀಕರಣ ಹೊಂದಿರಬೇಕೆಂದು ಹೈಕೋರ್ಟ್ ಹೇಳಿದೆ. ಆದರೆ 2 ವರ್ಷಕ್ಕೊಮ್ಮೆ ಲಂಚ ಪಡೆಯುತ್ತಿರುವ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಿದೆ. ಇಲಾಖೆಯ ಬಹುತೇಕ ಕೆಲಸಗಳಿಗೆ ಆನ್ ಲೈನ್ ವ್ಯವಸ್ಥೆ ಇಲ್ಲ. ಆನ್ ಲೈನ್ ವ್ಯವಸ್ಥೆ ಇಲ್ಲದ್ದಕ್ಕೆ ಅಧಿಕಾರಿಗಳೆಲ್ಲಾರೂ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಶಿಕ್ಷಣ ಇಲಾಖೆ ಲಂಚದ ವ್ಯಾಪ್ತಿ ಶೇ.40-50ರಷ್ಟಿದೆ. ಡಿಡಿಪಿಐ 20%, ಬಿಇಒ 25% ಕಮಿಷನ್ ಕೇಳುತ್ತಾರೆ. ಈ ಬಗ್ಗೆ ಆಡಿಯೋ ರೆಕಾರ್ಡ್ ಇದೆ. ಶೀಘ್ರದಲ್ಲಿಯೇ ರಿಲೀಸ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.