ಪಿಂಚಣಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಈ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯ
ಶಿವಮೊಗ್ಗ: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಸೆಪ್ಟೆಂಬರ್ 15 ರೊಳಗೆ ಆಧಾರ್ ಜೋಡಣೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಪಿಂಚಣಿ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆ ಇದೆ.
ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುವ ಫಲಾನುಭವಿಗಳು ಕೂಡಲೇ ತಮ್ಮ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕು ಎಂದು ಭದ್ರಾವತಿ ತಹಶೀಲ್ದಾರ್ ತಿಳಿಸಿದ್ದಾರೆ.
ಇಎಂಒ ಮೂಲಕ ಉಳಿತಾಯ ಖಾತೆಗೆ ಪಿಂಚಣಿ ವರ್ಗಾವಣೆ ಮಾಡುವುದು ಕಡ್ಡಾಯವಾಗಿದೆ. ಫಲಾನುಭವಿಗಳು ಇದಕ್ಕೆ ಸಹಕಾರ ನೀಡಬೇಕು. ಸೆಪ್ಟೆಂಬರ್ 15 ರೊಳಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದ್ದು, ಇಲ್ಲದಿದ್ದರೆ ಪಿಂಚಣಿ ಸೌಲಭ್ಯದಿಂದ ವಂಚಿತರಾಗಬಹುದು. ಇದಕ್ಕೆ ಫಲಾನುಭವಿಗಳು ಜವಾಬ್ದಾರರಾಗಿರುತ್ತಾರೆ ಎಂದು ಹೇಳಲಾಗಿದೆ.