ಕಾಂಗ್ರೆಸ್ ಹೊಸ ‘ಅಧ್ಯಕ್ಷ’ರ ಆಯ್ಕೆಗಾಗಿ ಚುನಾವಣೆಗೆ ಮುಹೂರ್ತ ಫಿಕ್ಸ್ !

ಹಲವಾರು ಹಿರಿಯ ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದು, ಈ ನಡುವೆ ಇದೀಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ANI ವರದಿ ಮಾಡಿದೆ.

 

ವರದಿ ಪ್ರಕಾರ, ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಮತ ಎಣಿಕೆಯು ಅಕ್ಟೋಬರ್ 19ಕ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ. ಸೆಪ್ಟೆಂಬರ್ 22ರಂದು ಚುನಾವಣೆ ಅಧಿಸೂಚನೆ ಹೊರಬೀಳಲಿದ್ದು, ಸೆಪ್ಟೆಂಬರ್ 24 ಮತ್ತು 30ರ ನಡುವೆ ನಾಮಪತ್ರ ಸಲ್ಲಿಸುವ ದಿನಾಂಕ ಇರುತ್ತದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ.

ಸಿಡಬ್ಲ್ಯೂಸಿ ಸಭೆಯ ಅಧ್ಯಕ್ಷತೆಯನ್ನು ಸೋನಿಯಾ ಗಾಂಧಿ ವರ್ಚುವಲ್ ಆಗಿ ವಹಿಸಿಕೊಂಡಿದ್ದಾರೆ. ಏಕೆಂದರೆ ಅವರು ವೈದ್ಯಕೀಯ ತಪಾಸಣೆಗಾಗಿ ವಿದೇಶದಲ್ಲಿದ್ದಾರೆ. ಅವರ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ, ಆಗಸ್ಟ್ 21 ಮತ್ತು ಸೆಪ್ಟೆಂಬರ್ 20ರ ನಡುವೆ ಸೋನಿಯಾ ಗಾಂಧಿ ಅವರ ಸ್ಥಾನಕ್ಕೆ ಪಕ್ಷವು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಾಗಿತ್ತು.

Leave A Reply

Your email address will not be published.