ಉಡುಪಿ ಕೋರ್ಟ್ ನಲ್ಲಿ ಉದ್ಯೋಗವಕಾಶ | ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 42000ದವರೆಗೆ ವೇತನ

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3 ಟೈಪಿಸ್ಟ್- ಕಾಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 26 ಆಗಿದೆ.

ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಶೈಕ್ಷಣಿಕ ಅರ್ಹತೆ: ಉಡುಪಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ: ಉಡುಪಿ ಇಕೋರ್ಟ್ ನೇಮಕಾತಿ
ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಪ.ಜಾ, ಪ. ಜಾ, ಪ್ರವರ್ಗ- 1 ಅಭ್ಯರ್ಥಿಗಳು: 05 ವರ್ಷಗಳು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
ವಿಕಲಚೇತನ, ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ: ಪ.ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳು: 100 ರೂ. ಸಾಮಾನ್ಯ, ಪ್ರವರ್ಗ 1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 200 ರೂ.

ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ಆಗಸ್ಟ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಸೆಪ್ಟೆಂಬರ್ 2022
ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 28 ಸೆಪ್ಟೆಂಬರ್‌ 2022

ಅಧಿಕೃತ ವೆಬ್ಸೈಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave A Reply

Your email address will not be published.